ಬೆಂಗಳೂರಿನಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ತಾಯಿ, ಮಗು ಸಾವು
ಸಿಲಿಕಾನ್ ಸಿಟಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ.
ಇಂದು ಬೆಳಗ್ಗೆ ಈ ಭೀಕರ ಅಪಘಾತ ಸಂಭವಿಸಿದ್ದು, ಪತಿ, ಪತ್ನಿ ತಮ್ಮ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಕೆ,ಆರ್.ಪುರಂನಿಂದ ಧರ್ಮಪುರಿಗೆ ಹೊರಟ್ಟಿದ್ದರು. ಮಾರತಹಳ್ಳಿಯ ವರ್ತಲ ರಸ್ತೆಯಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅದರ ರಭಸಕ್ಕೆ ತಾಯಿ ಮಗು ಬಲಕ್ಕೆ ಬಿದ್ದಿದ್ದಾರೆ. ಅವರ ಮೇಲೆಯೇ ಲಾರಿ ಹರಿದಿದೆ. ತಾಯಿ ಮಗು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಲಾರಿ ಡಿಕ್ಕಿ ಹೊಡೆದಾಗ ಬಲಕ್ಕೆ ಬಿದ್ದ ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಹೆಂಡತಿ-ಮಗುವಿನ ತಲೆ ಅಪ್ಪಚ್ಚಿ ಆಗಿರೋದನ್ನು ನೋಡಿ ಅಘಾತಕ್ಕೊಳಗಾಗಿದ್ದರು. ಏನು ಮಾಡಬೇಕೆಂದು ತೋಚದೆ ಹೆಂಡತಿ-ಮಗುವಿನ ಶವವನ್ನು ಅಪ್ಪಿ ರೋದಿಸುತ್ತಿದ್ದರು.
ಈ ವೇಳೆ ಸ್ಥಳೀಯರ್ಯಾರು ಸಹಾಯಕ್ಕೆ ಧಾವಿಸಿಲ್ಲ. ಅಪಘಾತದ ಭೀಕರತೆ ಕಂಡು ಸ್ಥಳೀಯರು ದೂರವೇ ಉಳಿದಿದ್ದಾರೆ. ರಸ್ತೆ ಮಧ್ಯೆ ಘಟನೆ ನಡೆದಿದ್ದು ವಾಹನಗಳು ಶವಗಳ ಅಕ್ಕಪಕ್ಕದಲ್ಲೇ ಚಲಿಸುತ್ತಿದ್ದವು.
ಅಪಘಾತವಾದ ನಂತರ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸಂಚಾರಿ ಪೊಲೀಸರು ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪೋಸ್ಟ್ ಮಾರ್ಟಂ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಎಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


