ರಾಜ್ಯ ಸರ್ಕಾರದಿಂದ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ ಅಧಿಸೂಚನೆ ಪ್ರಕಟ
ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ತಂದಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಅಧಿನಿಯಮ 2021ಕ್ಕೆ ರಾಜ್ಯ ಸರ್ಕಾರ ಸೋಮವಾರ....

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ತಂದಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಅಧಿನಿಯಮ 2021ಕ್ಕೆ ರಾಜ್ಯ ಸರ್ಕಾರ ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.
ಕಳೆದ ಮಳೆಗಾಲದ ಅಧಿವೇಶನದಲ್ಲಿ ಎರಡೂ ಸದನಗಲ್ಲಿ ಅಂಗೀಕೃತವಾಗಿರುವ ವಿಧೇಯಕಕ್ಕೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಅವರು ಒಪ್ಪಿಗೆ ನೀಡಿದ್ದು, ರಾಜ್ಯ ಸರ್ಕಾರ ತನ್ನ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಈ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕಟ್ಟಡಗಳು ಅಂದರೆ, ದೇವಸ್ಥಾನ, ಮಸೀದಿ, ಚರ್ಚ್, ಬಸದಿ, ಬೌದ್ದ ವಿಹಾರ, ಗುರುದ್ವಾರ, ಮಜರ್‌ಗಳನ್ನು ಸದ್ಯ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ಅಥವಾ ಯಾವುದೇ ನ್ಯಾಯಾಲಯ, ನ್ಯಾಯಾಧೀಕರಣ ಅಥವಾ ಪ್ರಾಧಿಕಾರದ ತೀರ್ಪು, ಡಿಕ್ರಿ, ಆದೇಶ ಏನೇ ಇದ್ದರೂ, ಈ ಕಾಯ್ದೆ ಜಾರಿಯಾದ ದಿನದವರೆಗೂ ಸಾರ್ವಜನಿಕ ಸ್ಥಳಗಳಲ್ಲಿ ಅಸ್ತಿತ್ವದಲ್ಲಿರುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತಿಲ್ಲ ಎಂದು ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೈಸೂರಿನ ನಂಜನಗೂಡು ಬಳಿ ಇರುವ ದೇವಾಲಯವನ್ನು ಹಠಾತ್ತನೆ ನೆಲಸಮ ಮಾಡಿದ್ದ ವಿಚಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಬಾರಿ ಕೋಲಾಹಲದ ಚರ್ಚೆಗೆ ಗ್ರಾಸವಾಗಿತ್ತು. ನಂತರ ನೆಲಸಮಗೊಂಡ ಜಾಗದಲ್ಲಿ ದೇವಾಲಯ ನಿರ್ಮಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಅಧಿಕಾರಿಗಳ ಉದ್ಧಟತನದಿಂದ ಇಂತಹ ಘಟನೆಗಳು ಮುಂದೆ ನಡೆಯದಂತೆ ಧಾರ್ಮಿಕ ಸ್ಥಳಗಳ ಸ್ವರೂಪ ಸಂರಕ್ಷಣೆ ಮಾಡುವ ಮಸೂದೆಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಸರ್ಕಾರ ಮಂಡನೆ ಮಾಡಿ, ಅಂಗೀಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


