ರಾಜ್ಯ

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಚಿತ್ರಹಿಂಸೆ ನೀಡಿದ್ಧ ಆರು ಮಂದಿಯನ್ನು ಬಂಧಿಸಿದ ಪೊಲೀಸರು

ಸರ್ಕಾರಿ ಶಾಲೆಯ ಆವರಣದಲ್ಲಿ ಐವರು ಅಪ್ರಾಪ್ತ ಬಾಲಕರಿಗೆ ಚಿತ್ರಹಿಂಸೆ ನೀಡಿ ಬೀಡಿ ಸೇದಲು ಒತ್ತಾಯಿಸಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಚಿತ್ರಹಿಂಸೆ ನೀಡಿದ್ಧ ಆರು ಮಂದಿಯನ್ನು ಬಂಧಿಸಿದ ಪೊಲೀಸರು
ಪ್ರತ್ಯಕ್ಷ ದೃಶ್ಯ
Published On :

ಬೆಂಗಳೂರು: ಸರ್ಕಾರಿ ಶಾಲೆಯ ಆವರಣದಲ್ಲಿ ಐವರು ಅಪ್ರಾಪ್ತ ಬಾಲಕರಿಗೆ ಚಿತ್ರಹಿಂಸೆ ನೀಡಿ ಬೀಡಿ ಸೇದಲು ಒತ್ತಾಯಿಸಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಐವರು ಬಾಲಕರು ಬಿ. ನಾರಾಯಣಪುರದ ಸರ್ಕಾರಿ ಶಾಲೆಯ ಆವರಣದಲ್ಲಿ ಕ್ರಿಕೆಟ್ ಆಡಲು ಬಂದಿದ್ದರು. ಈ ವೇಳೆ ಅವರನ್ನು ಸುತ್ತುವರೆದ ಕುಡಿದು ಚಿತ್ತಾಗಿದ್ದ ಯುವಕರ ತಂಡ ಬಾಲಕರಿಗೆ ಬೀಡಿ ಸೇದುವಂತೆ ಒತ್ತಾಯಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಆರಂಭದಲ್ಲಿ ಮಕ್ಕಳು ಬೀಡಿ ಸೇದಲು ನಿರಾಕರಿಸಿದಾಗ ಅವರನ್ನು ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿದ್ದರು. ಮಕ್ಕಳಿಗೆ ಕಿರುಕುಳ ನೀಡುತ್ತಿರುವುದನ್ನು ಆರೋಪಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

ಮನೆಗೆ ತಲುಪಿದ ಬಾಲಕರು ತಮ್ಮ ಪೋಷಕರಿಗೆ ನಡೆದ ವಿಚಾರವನ್ನು ತಿಳಿಸಿದ್ದಾರೆ. ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಈ ದೂರಿನ ನಂತರ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.