ರಾಜ್ಯ

ಕಲಬುರಗಿ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ, ಇಬ್ಬರ ಸಾವು

ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ.

ಕಲಬುರಗಿ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ, ಇಬ್ಬರ ಸಾವು
ಸಾಂದರ್ಭಿಕ ಚಿತ್ರ
Published On :

ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 

27 ವರ್ಷದ ದೀಕ್ಷಾ ಶರ್ಮಾ ಕುಕೃತ್ಯ ಎಸಗಿದ ಮಹಿಳೆ. ದೀಕ್ಷಾ ಅವರ ಎರಡು ವರ್ಷದ ಪುತ್ರಿ ಸಿಂಚನಾ ತಾಯಿಯೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇನ್ನು 4 ವರ್ಷದ ಪುತ್ರ ಧನಂಜಯ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. 

ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ದೀಕ್ಷಾ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ದೀಕ್ಷಾ ಅತ್ತೆ ಕೂಡ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.  ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದೀಕ್ಷಾ. 

ಮೂಲತಃ ಕಾಳಗಿ ತಾಲೂಕಿನ ದೀಕ್ಷಾ ಅವರನ್ನು ಇಲ್ಲಿನ ಪಂಚಶೀಲ ನಗರದ ವಸಂತ ಶರ್ಮಾಗೆ ಐದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು‌. ಆದರೆ, ದೀಕ್ಷಾಗೆ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಮತ್ತು ತವರು‌ ಮನೆಗೆ ಕಳುಹಿಸುತ್ತಿರಲಿಲ್ಲ ಎನ್ನಲಾಗಿದೆ.

ಸೋಮವಾರ ಕೂಡ ತವರು ಮನೆಗೆ ಹೋಗಲು ದೀಕ್ಷಾ ತಯಾರಿ ಆಗಿದ್ದಳು. ಆದರ, ಗಂಡನ ಮನೆಯಲ್ಲಿ ಅವಕಾಶ ನೀಡಿರಲಿಲ್ಲ ಎಂದು ಹೇಳಲಾಗಿದೆ. ಇದರಿಂದ ಬೇಸತ್ತು ಮಧ್ಯಾಹ್ನ ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ‌. ಪರಿಣಾಮ ತಾಯಿ ಮತ್ತು ಮಗಳು ಸಾವನ್ನಪ್ಪಿದ್ದಾರೆ‌. ಸದ್ಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿಷಯ ತಿಳಿದು ದೀಕ್ಷಾ ತವರು‌ ಮನೆಯವರು ಹಾಗೂ ಸ್ಪೇಷನ್ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಘಟನೆಗೆ ಗಂಡನ ಮನೆಯವರೇ ಕಾರಣ. ಅವರೇ ಬೆಂಕಿ ಕೊಲೆ ಮಾಡಿದ್ದಾರೆ ಎಂದು ದೀಕ್ಷಾ ಕುಟುಂಬದವರು ಆರೋಪಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.