ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ: ಧಾರವಾಡದಲ್ಲಿ 3 ದಿನಗಳ ಕಾಲ ಆರ್‌ಎಸ್‌ಎಸ್ ಬೈಠಕ್, ಭಾಗವತ್ ಭಾಗಿ
ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಇದೇ 28 ರಿಂದ 30ರವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ಧಾರವಾಡ: ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಇದೇ 28 ರಿಂದ 30ರವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.
ಈ ಕುರಿತು ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ ಅಂಬೇಕರ ಅವರು ಮಾಹಿತಿ ನೀಡಿದ್ದು, ಸಂಘದ ಮುಂದಿನ ಯೋಜನೆಗಳು ಹಾಗೂ ಅಭಿವೃದ್ಧಿ, ದೇಶ ಹಾಗೂ ನಮ್ಮ ಸ್ವಾಭಿಮಾನದ ಕುರಿತು ತೆಗೆದುಕೊಳ್ಳಬೇಕಾದ ನಿಲುವುಗಳ ಬಗೆಗೆ ಚರ್ಚೆಗಳು ನಡೆಯಲಿವೆ ಎಂದು ಹೇಳಿದ್ದಾರೆ.
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹಾಗೂ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ. 75ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ದೇಶದಲ್ಲಿ ಇದಕ್ಕೆ ಪೂರಕ ಹಾಗೂ ಪ್ರೇರಕ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಚಿಂತನ ಮಂಥನ ನಡೆಯಲಿದೆ. 2025ಕ್ಕೆ ಆರ್‌ಎಸ್‌ಎಸ್ ಶತಮಾನೋತ್ಸವವಿದೆ. 2021 ರಿಂದ 2024ರ ಅವಧಿಯಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ಬಾರಿ ಪೂರ್ಣ ಪ್ರಮಾಣದ ಬೈಠಕ್ ನಡೆಯಲಿದ್ದು, ಆರ್‌ಎಸ್‌ಎಸ್ ಮುಖ್ಯಸ್ಥ, ಸರಸಂಘಚಾಲಕ ಮೋಹನ ಭಾಗವತ್, ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ, ಅಖಿಲ ಭಾರತೀಯ ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಸೇರಿ ದೇಶದ ಸುಮಾರು 350 ಪ್ರತಿನಿಧಿಗಳು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ‘ಸೇವಾ ಭಾರತಿ’ಯ ಅನೇಕ ಕಾರ್ಯಕರ್ತರು ಸೇವೆ ಸಲ್ಲಿಸಿದ್ದಾರೆ. 3ನೇ ಅಲೆ ಎದುರಿಸಲು 1.50 ಲಕ್ಷ ಸ್ಥಳಗಳಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


