ಹೊಸಕೋಟೆ: ಪ್ರೇಮ ವೈಫಲ್ಯ, ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ!
ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಕೊಲೆ ಮಾಡಿದ ಯುವಕ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಹೊಸಕೋಟೆ: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಕೊಲೆ ಮಾಡಿದ ಯುವಕ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಹೊಸಕೋಟೆ ತಾಲ್ಲೂಕಿನ ಲಿಂಗೀರಮಲ್ಲಸಂದ್ರ ಗ್ರಾಮದ ಉಷಾ (24) ಕೊಲೆಯಾದ ಯುವತಿ. ಗೋಪಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ. ಇಬ್ಬರು ಒಂದೇ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು.
ಯುವತಿ ತನ್ನ ಅಣ್ಣನ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಆತ ಸಂಜೆ ಮನೆಗೆ ಬಂದು ನೋಡಿದಾಗ ಉಷಾ ಸತ್ತು ಬಿದ್ದಿರುವುದು ತಿಳಿದು ಬಂದಿದೆ. ಆಕೆಯ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಆಕೆಯ ಮನೆಯಿಂದ ಸುಮಾರು 10 ಕಿಮೀ ದೂರದ ಕೆರೆಯ ಬಳಿ ಗೋಪಾಲಕೃಷ್ಣನ ಶವ ಪತ್ತೆಯಾಗಿದೆ.
ಉಷಾ ಅಣ್ಣ ಮನೆಯಲ್ಲಿ ಇಲ್ಲದ್ದನ್ನು ತಿಳಿದಿದ್ದ ಗೋಪಾಲಕೃಷ್ಣ ಬೆಳಗ್ಗೆ ಸುಮಾರು 6 ಗಂಟೆ ವೇಳೆಗೆ ಮನೆಗೆ ಬಂದಿದ್ದಾನೆ. ಈ ವೇಳೆ ಉಷಾ ಕೆಲಸಕ್ಕೆ ಹೋಗಲು ಸಿದ್ಧಳಾಗಿದ್ದಳು. ಯೂನಿಫಾರ್ಮ್ ನಲ್ಲಿಯೇ ಆಕೆ ಶವವಾಗಿದ್ದಾಳೆ.
ಪ್ರಾಥಮಿಕ ವಿಚಾರಣೆಯಲ್ಲಿ ಗೋಪಾಲಕೃಷ್ಣ ವಿವಾಹಿತನಾಗಿದ್ದು, ಆತನ ಪತ್ನಿ ಆತನನ್ನು ತೊರೆದಿದ್ದಾಳೆ ಎಂದು ತಿಳಿದುಬಂದಿದೆ.
ಉಷಾಗೆ ಕೆಲಸ ಕೊಡಿಸಲು ಸಹಾಯ ಮಾಡಿದ ಗೋಪಾಲಕೃಷ್ಣ ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಆದರೆ ಉಷಾಗೆ ಅವನ ಬಗ್ಗೆ ಆಸಕ್ತಿ ಇರಲಿಲ್ಲ ಮತ್ತು ಸೂಕ್ತ ವರನನ್ನು ಹುಡುಕುತ್ತಿದ್ದಳು. ಇದರಿಂದ ಕುಪಿತಗೊಂಡು ಕೊಲೆ ಮಾಡಿರುವ ಶಂಕೆ ಇದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅನುಗೊಂಡನಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರೆ, ತಿರುಮಲ ಶೆಟ್ಟಿಹಳ್ಳಿ ಪೊಲೀಸರು ಗೋಪಾಲಕೃಷ್ಣ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


