ರಾಜ್ಯ

ಪುನೀತ್ ಆರೋಗ್ಯ ಸ್ಥಿತಿ ಗಂಭೀರ: ಏನೂ ಹೇಳಲಾಗದು- ಆಸ್ಪತ್ರೆ ವೈದ್ಯರ ಹೇಳಿಕೆ 

ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿರುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪುನೀತ್ ಆರೋಗ್ಯ ಕುರಿತಂತೆ ಹೇಳಿಕೆ ನೀಡಿದ ಆಸ್ಪತ್ರೆ ವೈದ್ಯ ಡಾ. ರಂಗನಾಥ್, ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯ ಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿರುವುದಾಗಿ ತಿಳಿಸಿದರು.

ಪುನೀತ್ ಆರೋಗ್ಯ ಸ್ಥಿತಿ ಗಂಭೀರ: ಏನೂ ಹೇಳಲಾಗದು- ಆಸ್ಪತ್ರೆ ವೈದ್ಯರ ಹೇಳಿಕೆ 
ಪುನೀತ್ ರಾಜ್ ಕುಮಾರ್
Published On :

ಬೆಂಗಳೂರು: ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿರುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪುನೀತ್ ಆರೋಗ್ಯ ಕುರಿತಂತೆ  ಹೇಳಿಕೆ ನೀಡಿದ ಆಸ್ಪತ್ರೆ ವೈದ್ಯ ಡಾ. ರಂಗನಾಥ್,  ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯ ಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿರುವುದಾಗಿ ತಿಳಿಸಿದರು.

ಇಂದು ಬೆಳಗ್ಗೆ ಎದೆನೋಪು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಪುನೀತ್ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಮಾಹಿತಿ ನೀಡಿದರು.

ಹೃದಯಾಘಾತಕ್ಕೆ ನೀಡಬೇಕಾದ ಚಿಕಿತ್ಸೆಗಳನ್ನು ನೀಡಿದ್ದೇವೆ. ಈಗಲೂ ನಾವು ಅಂತಿಮ ಪ್ರಯತ್ನ ಮಾಡುತ್ತಿದ್ದೇವೆ. ಅವರ ಪರಿಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವೇ ಸಮಯದಲ್ಲಿ ಅವರ ಆರೋಗ್ಯದ ಬಗ್ಗೆ ಮತ್ತೊಮ್ಮೆ ಮಾಹಿತಿ ನೀಡಲಾಗುವುದು ಎಂದು ಡಾ. ರಂಗನಾಥ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.