ರೊಹಿಂಗ್ಯಾ ವಲಸಿಗರ ಗಡಿಪಾರು: ಸುಪ್ರೀಂ ಕೋರ್ಟ್ ನಲ್ಲಿ ಪರಿಷ್ಕೃತ ಅಫಿಡವಿಟ್ಟು ಸಲ್ಲಿಸಿದ ರಾಜ್ಯ ಸರ್ಕಾರ
ರೊಹಿಂಗ್ಯಾ ವಲಸಿಗರ ಗಡಿಪಾರಿನ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದಿದೆ. ರೊಹಿಂಗ್ಯಾ ವಲಸಿಗರ ಗಡಿಪಾರಿಗೆ ಮತ್ತು ಬೆಂಗಳೂರಿನಲ್ಲಿ ವಾಸಿಸುತ್ತಿರುವ ರೊಹಿಂಗ್ಯಾಗಳನ್ನು ಗಡಿಪಾರು ಮಾಡುವ ಯಾವುದೇ ಯೋಜನೆ ಇಲ್ಲ ಎಂಬ ತನ್ನ ಹಿಂದಿನ ನಿಲುವಿನಿಂದ ಸರ್ಕಾರ ಹಿಂದೆ ಸರಿದಿದೆ.

ಬೆಂಗಳೂರು: ರೊಹಿಂಗ್ಯಾ ವಲಸಿಗರ ಗಡಿಪಾರಿನ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದಿದೆ. ರೊಹಿಂಗ್ಯಾ ವಲಸಿಗರ ಗಡಿಪಾರಿಗೆ ಮತ್ತು ಬೆಂಗಳೂರಿನಲ್ಲಿ ವಾಸಿಸುತ್ತಿರುವ ರೊಹಿಂಗ್ಯಾಗಳನ್ನು ಗಡಿಪಾರು ಮಾಡುವ ಯಾವುದೇ ಯೋಜನೆ ಇಲ್ಲ ಎಂಬ ತನ್ನ ಹಿಂದಿನ ನಿಲುವಿನಿಂದ ಸರ್ಕಾರ ಹಿಂದೆ ಸರಿದಿದೆ. ಈ ಕುರಿತು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪರಿಷ್ಕೃತ ಅಫಿಡವಿಟ್ಟು ಸಲ್ಲಿಸಿದೆ.
ಬಾಂಗ್ಲಾದೇಶ ಹಾಗೂ ರೊಹಿಂಗ್ಯಾ ಮುಸ್ಲಿಮರು ಸೇರಿದಂತೆ ಅಕ್ರಮ ವಲಸಿಗರು ಹಾಗೂ ಒಳನುಸುಳುಕೋರರನ್ನು ಬಂಧಿಸಬೇಕು ಹಾಗೂ ಗಡಿಪಾರು ಮಾಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕರ್ನಾಟಕ ಬಿಜೆಪಿ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಈ ಅರ್ಜಿಯನ್ನು ವಜಾಗೊಳಿಸುವಂತೆ ಅದು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿತ್ತು.
ಆದರೆ ಇದೀಗ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದಿದೆ. ರೊಹಿಂಗ್ಯಾ ವಲಸಿಗರನ್ನು ಯಾವುದೇ ಶಿಬಿರಗಳಲ್ಲಿ ಅಥವಾ ನಿರಾಶ್ರಿತ ಕೇಂದ್ರಗಳಲ್ಲಿ ಇರಿಸಿಲ್ಲ. 126 ರೋಹಿಂಗ್ಯಾ ವಲಸಿಗರನ್ನು ರಾಜ್ಯದಲ್ಲಿ ಗುರುತಿಸಲಾಗಿದೆ ಎಂದು ರಾಜ್ಯ ಗೃಹ ಇಲಾಖೆ ತನ್ನ ಹೊಸ ಅಫಿಡವಿಟ್ಟಿನಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


