ಕೋವಿಡ್-19: ರಾಜ್ಯದಲ್ಲಿ ಇಂದು 347 ಹೊಸ ಸೋಂಕು ಪ್ರಕರಣ ಪತ್ತೆ, 10 ಸಾವು
ರಾಜ್ಯದಲ್ಲಿ ಕೋವಿಡ್ ಅಬ್ಬರ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 347 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಅಬ್ಬರ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 347 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಅಂತೆಯೇ 10 ಮಂದಿ ಸಾವಿಗೀಡಾಗಿದ್ದು, 255 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇನ್ನುಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,88,041ಕ್ಕೆ ಏರಿದ್ದು, 29,41,233 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೋವಿಡ್‌ನಿಂದ ಮೃತರ ಒಟ್ಟು ಸಂಖ್ಯೆ 38,071ಕ್ಕೆ ಏರಿದೆ.
ರಾಜ್ಯದಲ್ಲಿ ಸದ್ಯ 8,708 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢ ಪ್ರಮಾಣ ಶೇಕಡಾ 0.31ರಷ್ಟಿದ್ದು, ಸಾವಿನ ಪ್ರಮಾಣ ಶೇಕಡಾ 2.88ರಷ್ಟಿದೆ.
ಬೆಂಗಳೂರಿನಲ್ಲಿ 166 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 4 ಸಾವು ಸಂಭವಿಸಿವೆ. ಮೈಸೂರಿನಲ್ಲಿ 44, ದಕ್ಷಿಣ ಕನ್ನಡದಲ್ಲಿ 21 ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


