ಪ್ರಸಾದ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ
ಮೈಸೂರಿನ ಚಾಮುಂಡಿ ಬೆಟ್ಟವನ್ನು ಪ್ರಸಾದ ಯೋಜನೆ ವ್ಯಾಪ್ತಿಯಲ್ಲಿ ಸೇರಿಸುವಲ್ಲಿ ಅಗತ್ಯ ವಿವರ ಒದಗಿಸುವಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಲೋಪ ಕಂಡುಬಂದ ಮಾರನೇ ದಿನವೇ ಪ್ರವಾಸೋದ್ಯಮ ಸಚಿವಾಲಯ ಈ ಪ್ರಸ್ತಾವಕ್ಕೆ ತಾತ್ವಿಕ ಅನುಮೋದನೆ ನೀಡಿದೆ.

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟವನ್ನು ಪ್ರಸಾದ ಯೋಜನೆ ವ್ಯಾಪ್ತಿಯಲ್ಲಿ ಸೇರಿಸುವಲ್ಲಿ ಅಗತ್ಯ ವಿವರ ಒದಗಿಸುವಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಲೋಪ ಕಂಡುಬಂದ ಮಾರನೇ ದಿನವೇ ಪ್ರವಾಸೋದ್ಯಮ ಸಚಿವಾಲಯ ಈ ಪ್ರಸ್ತಾವಕ್ಕೆ ತಾತ್ವಿಕ ಅನುಮೋದನೆ ನೀಡಿದೆ.
ಶುಕ್ರವಾರ ಮುಕ್ತಾಯವಾದ ದಕ್ಷಿಣ ವಲಯಗಳ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರ ಎರಡು ದಿನಗಳ ಸಮಾವೇಶದಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಅಗತ್ಯ ವಿವರಗಳನ್ನು ಕೇಂದ್ರ ಪ್ರವಾಸೋದ್ಯಕ್ಕೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದುಕೊಂಡಿದ್ದಾರೆ.
ಅಂತಿಮ ಗ್ರೀನ್ ಸಿಗ್ನಿಲ್ ನೀಡುವ ಮುನ್ನ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ನಿಯೋಗವೊಂದು ಸ್ಥಳಕ್ಕೆ ಭೇಟಿ ನೀಡಲು ಒಪ್ಪಿಕೊಂಡಿದೆ. ಅವರು ಬಯಸಿದಂತೆ ಬದಲಾವಣೆ ಮಾಡಲು ವಿವರಣೆ ನೀಡಲಾಯಿತು. ಈ ಧಾರ್ಮಿಕ ಕ್ಷೇತ್ರದ ಭಿನ್ನತೆ, ಮೌಲ್ಯತೆ, ಇದರಿಂದ ಕೇಂದ್ರ ಪ್ರವಾಸೋದ್ಯ ಇಲಾಖೆಗೆ ಏನು ಪಡೆಯಬಹುದು ಮತ್ತಿತರ ಕೆಲವೊಂದು ಬದಲಾವಣೆ ಮಾಡಲು ಸಚಿವಾಲಯ ಬಯಸಿತ್ತು. ಅವರ ಸಲಹೆ ಮೇರೆಗೆ 'ಪ್ರಕಾರ' (ದೇವಾಲಯ ಸುತ್ತ ಆವರಣ) ಪ್ರಸ್ತಾವವನ್ನು ಸೇರಿಸಲಾಗಿದೆ ಎಂದು ರಾಜ್ಯ ಪ್ರವಾಸೋದ್ಯ ಇಲಾಖೆ ನಿರ್ದೇಶಕರಾದ ಸಿಂಧು ಪಿ ರೂಪೇಶ್ ತಿಳಿಸಿದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ನಂದಿ ಪ್ರತಿಮೆಯನ್ನು ಸುಂದರಗೊಳಿಸಲು ಅವರು ಸಲಹೆ ನೀಡಿದ್ದಾಗಿ ಸಿಂಧು ಪಿ. ರೂಪೇಶ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


