ನಟ ಪುನೀತ್ ರಾಜ್ ಕುಮಾರ್'ಗೆ ಭಾವಪೂರ್ಣ ವಿದಾಯ: ಅಂತಿಮ ಸಂಸ್ಕಾರದಲ್ಲಿ ರವಿಚಂದ್ರನ್, ಸುದೀಪ್, ಯಶ್ ಸೇರಿ ಗಣ್ಯರ ಕಂಬನಿ
ಕನ್ನಡ ಚಿತ್ರರಂಗದ ಪೀತಿಯ 'ಅಪ್ಪು' ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ಶಾಸ್ತ್ರೋಕ್ತವಾಗಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ.

ಬೆಂಗಳೂರು: ಕನ್ನಡ ಚಿತ್ರರಂಗದ ಪೀತಿಯ 'ಅಪ್ಪು' ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ಶಾಸ್ತ್ರೋಕ್ತವಾಗಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ.
'ವೀರ ಕನ್ನಡಿಗ'ನ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಡೆಯುತ್ತಿದ್ದು, ರಾಜ್ ಕುಟುಂಬದ ಸದಸ್ಯರು ಸೇರಿದಂತೆ ಗಣ್ಯಾತಿಗಣ್ಯರ ದಂಡೇ ಸ್ಥಳದಲ್ಲಿ ನೆರೆದಿದೆ.
ನಟ ರವಿಚಂದ್ರನ್, ಸುದೀಪ್, ಯಶ್, ನಟ ರಿಷಭ್ ಶೆಟ್ಟಿ, ಟೆನಿಸ್ ಕೃಷ್ಣ, ನಟಿ, ಸೃಜನ್ ಲೋಕೇಶ್, ಸಂಸದೆ ಸುಮಲತಾ, ಯೋಗಿ ಸೇರಿದಂತೆ ಅನೇಕರು ಸ್ಥಳದಲ್ಲಿ ಉಪಸ್ಥಿತರಿದ್ದಾರೆ.
ಈ ವೇಳೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ವೈ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಪುನೀತ್ ಅಂತ್ಯಕ್ರಿಯೆಗೂ ಮುನ್ನ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಲಾಯಿತು.
ಕುಶಾಲ ತೋಪು ಹಾರಿಸಿ ಪುನೀತ್ಗೆ ಗೌರವ ಸಲ್ಲಿಕೆ
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಕೆಲ ಹೊತ್ತಿನಲ್ಲೇ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನಡೆಯಲಿದ್ದು, ಕುಶಾಲತೋಪು ಹಾರಿಸಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದೆ.
ಸರ್ಕಾರದ ವತಿಯಿಂದ ವಿಧಿವಿಧಾನಗಳು ಮುಕ್ತಾಯವಾಗಿದ್ದು, ಇದೀಗ ಕುಟುಂಬಸ್ಥರಿಂದ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


