ಸಚಿವರು ಅಧಿವೇಶನಕ್ಕೆ ಗೈರು ಹಾಜರಾಗುವಂತಿಲ್ಲ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಬೆಂಗಳೂರು: ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ಈ ಸಂಬಂಧ ಎಲ್ಲಾ ಸಚಿವರಿಗೂ ಅಗತ್ಯ ಸೂಚನೆಗಳನ್ನು ನೀಡಬೇಕು. ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಚಿವರು ಕಲಾಪದಲ್ಲಿ ಹಾಜರಾಗುವ ಸಂಬಂಧ ವಿನಾಯಿತಿ ಕೋರುವುದು ಸಾಮಾನ್ಯವಾಗಿದೆ’ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಮಹತ್ವದ ವಿಚಾರಗಳ ಬಗ್ಗೆ ಸದಸ್ಯರು ಕೇಳುವ ಪ್ರಶ್ನೆಗಳಿಗೆ ಸಂಬಂಧಿತ ಸಚಿವರು ಉತ್ತರ ನೀಡಬೇಕಾಗುತ್ತದೆ. ಹೀಗಾಗಿ ಸಚಿವರು ಚರ್ಚೆಯ ವೇಳೆ ಸದನದಲ್ಲಿ ಗೈರಾಗುವುದು ಸರಿಯಲ್ಲ. ಸಚಿವರ ಅನುಪಸ್ಥಿತಿ, ಆಡಳಿತ ಪಕ್ಷದಿಂದ ಉತ್ತರ ಪಡೆಯುವ ಸದಸ್ಯರ ಅವಕಾಶವನ್ನು ವಂಚಿಸುತ್ತದೆ. ಈ ಹಿನ್ನೆಲೆಯಲ್ಲಿ ಸಚಿವರು ಸದನದಲ್ಲಿ ಹಾಜರಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.
ಇದೇ ಸ್ವರೂಪದ ಪತ್ರವನ್ನು ಎಲ್ಲ ಸಚಿವರಿಗೂ ವ್ಯಕ್ತಿಗತವಾಗಿ ಕಳುಹಿಸಿರುವ ಸಭಾಧ್ಯಕ್ಷರು, ಸದನದ ಕಾರ್ಯ ಕಲಾಪದಲ್ಲಿ ಪಾಲ್ಗೊಳ್ಳುವಂತೆ ಮತ್ತು ತಮ್ಮ ಕ್ಷೇತ್ರಗಳ ಅಧಿಕೃತ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಲಾಪದಿಂದ ವಿನಾಯಿತಿ ಕೋರದಂತೆಯೂ ಸೂಚಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


