ಅಂಚೆ ಇಲಾಖೆಯಿಂದ 'ಅಪ್ಪೆ ಮಿಡಿ' ಕುರಿತು ವಿಶೇಷ ಪೋಸ್ಟ್ ಕವರ್ ಬಿಡುಗಡೆ
ಮಲೆನಾಡು ಪ್ರದೇಶದಲ್ಲಿ ಕಂಡುಬರುವ, ಉಪ್ಪಿನಕಾಯಿಗೆ ಬಳಸಲಾಗುವ ಅಪರೂಪದ ಮಾವುಗಳಲ್ಲಿ ಒಂದಾದ ಅಪ್ಪೆ ಮಿಡಿಗೆ ಅಂಚೆ ಇಲಾಖೆಯು ರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯತೆ ಮತ್ತು ಖ್ಯಾತಿಯನ್ನು ನೀಡಿದೆ.

ಶಿವಮೊಗ್ಗ: ಮಲೆನಾಡು ಪ್ರದೇಶದಲ್ಲಿ ಕಂಡುಬರುವ, ಉಪ್ಪಿನಕಾಯಿಗೆ ಬಳಸಲಾಗುವ ಅಪರೂಪದ ಮಾವುಗಳಲ್ಲಿ ಒಂದಾದ ಅಪ್ಪೆ ಮಿಡಿಗೆ ಅಂಚೆ ಇಲಾಖೆಯು ರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯತೆ ಮತ್ತು ಖ್ಯಾತಿಯನ್ನು ನೀಡಿದೆ.
ಅಂಚೆ ಲಕೋಟೆ ಮೇಲೆ ಅಪ್ಪೆಮಿಡಿಯ ಭಾವಚಿತ್ರ ಪ್ರಕಟಿಸಲಾಗಿದ್ದು, ಈ ವಿಶೇಷ ಪೋಸ್ಟ್ ಕವರ್ ಅನ್ನು ಶಿವಮೊಗ್ಗದಲ್ಲಿ ದಕ್ಷಿಣ ಕರ್ನಾಟಕದ ಪೋಸ್ಟ್ ಮಾಸ್ಟರ್ ಜನರಲ್ ಡಿಎಸ್ ವಿಆರ್ ಮೂರ್ತಿ ಅವರು ಬಿಡುಗಡೆ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮೂರ್ತಿ, ಅಪ್ಪೆ ಮಿಡಿ, ಮಾವಿನ ರಾಜ ಎಂದು ಜನಪ್ರಿಯವಾಗಿದೆ, ಮಲೆನಾಡು ಪ್ರದೇಶದಲ್ಲಿ ಬಹಳ ಪ್ರಸಿದ್ಧವಾಗಿದೆ ಮತ್ತು ಅಂಚೆ ಕವರ್ ಬಿಡುಗಡೆಯೊಂದಿಗೆ ಅದರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎಂದರು.
ಈ ಪ್ರಾದೇಶಿಕ ಮಾವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆಯನ್ನು ಗಳಿಸಲಿದೆ. ಇದು ರೈತರಿಗೆ ಹೆಚ್ಚು ಸಹಾಯ ಮಾಡುತ್ತದೆ. ಇದು ಮಲೆನಾಡು ಪ್ರದೇಶದ ಜಿಐ (ಭೌಗೋಳಿಕ ಸೂಚನೆ) ಟ್ಯಾಗ್ ಆಗಿದೆ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರದ ಭೌಗೋಳಿಕ ಗುರುತಿಸುವಿಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅಪ್ಪೆಮಿಡಿ ಇನ್ಮುಂದೆ ಅಂಚೆ ಇಲಾಖೆ ಲಕೋಟೆ ಮೇಲೆ ಕಾಣಿಸಲಿದೆ. ಪೋಸ್ಟ್ ಕವರ್ ಮೇಲೆ ಅಪ್ಪೆ ಮಿಡಿಯ ಭಾವಚಿತ್ರ ಪ್ರಕಟಿಸಲಾಗಿದೆ. ಲಕೋಟೆಯ ಹಿಂಭಾಗದಲ್ಲಿ ಅಪ್ಪೆ ಮಿಡಿಯ ವಿಶೇಷತೆ ಕುರಿತು ಮಾಹಿತಿ ಪ್ರಕಟವಾಗಿದೆ. ಅಲ್ಲದೆ ಅಪ್ಪೆಮಿಡಿ ಸಂರಕ್ಷಣೆ ಮಾಡುತ್ತಿರುವ ಸಾಗರದ ಕಾಕಲ್ ಇಂಡಸ್ಟ್ರಿಯ ವಿಳಾಸವನ್ನೂ ಪ್ರಕಟವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


