ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಕಲ ಸಿದ್ಧತೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಶುಕ್ರವಾರ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 07-00 ಗಂಟೆಯಿಂದ ಸಾಯಂಕಾಲ 06-00 ಗಂಟೆಯವರೆಗೆ ಮತದಾನ ಜರುಗಲಿದೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಶುಕ್ರವಾರ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 07-00 ಗಂಟೆಯಿಂದ ಸಾಯಂಕಾಲ 06-00 ಗಂಟೆಯವರೆಗೆ ಮತದಾನ ಜರುಗಲಿದೆ.
ಮಹಾನಗರ ಪಾಲಿಕೆಯ 82 ವಾರ್ಡ್‍ಗಳಲ್ಲಿ 4,06,280 ಪುರುಷ ಹಾಗೂ 4,11,092 ಮಹಿಳಾ ಮತ್ತು 86 ಇತರೆ ಸೇರಿ ಒಟ್ಟು 8,17,458 ಮತದಾರರು ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 82 ವಾರ್ಡ್‍ಗಳಲ್ಲಿನ ಮತದಾರರು ತಮ್ಮ ಹಕ್ಕು ಚಲಾಯಿಸಲು ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಪಾಲಿಕೆಯ ಚುನಾವಣೆಗೆ ಮತಗಟ್ಟೆ ಸಿಬ್ಬಂದಿ ಹಾಗೂ ಮತಯಂತ್ರಗಳ ಸಾಗಾಣಿಕೆಗಾಗಿ ವಿವಿಧ ರೀತಿಯ 155 ವಾಹನಗಳನ್ನು ಬಳಸಲಾಗುತ್ತಿದೆ. ಇದರಲ್ಲಿ 67 ಬಸ್, 24 ಮಿನಿಬಸ್, 41 ಮ್ಯಾಕ್ಸಿಕ್ಯಾಬ್ ಮತ್ತು 23 ಜೀಪ್ ಬಳಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


