ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ: ನಿರಾಣಿ
ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ ದೊರಕಲಿದೆ ಎಂದು ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ತುಮಕೂರು: ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ ದೊರಕಲಿದೆ ಎಂದು ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಗುರುವಾರ ತುಮಕೂರಿನ ವಸಂತನರಸಪುರದ ಕೈಗಾರಿಕಾ ಪ್ರದೇಶದಲ್ಲಿರುವ ಪುಡ್ ಪಾಕ್೯ಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಗುವುದು, 15 ದಿನಗದೊಳಗೆ 2022ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.
ದೇಶ- ವಿದೇಶಗಳಿಂದ ಕೈಗಾರಿಕೆ ಸ್ಥಾಪನೆ ಮಾಡಲು ಉದ್ಯಮಿಗಳಿಗೆ ಆಹ್ವಾನ ನೀಡಲಾಗುವುದು, ಕಳೆದ ಬಾರಿಯಂತೆ ಈ ಬಾರಿಯೂ ಹೂಡಿಕೆದಾರರ ಸಮಾವೇಶವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು, ಈ ಬಾರಿ ಹೊಸದಾಗಿ 5 ಲಕ್ಷ ಉದ್ಯೋಗಗಳನ್ನು ನೀಡುವ ಗುರಿ ಇದೆ ಎಂದರು.
ಸುಮಾರು 105 ಎಕರೆ ಪ್ರದೇಶದ ಪುಡ್ ಪಾರ್ಕ್ ನಲ್ಲಿ 1000 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. ದೇಶ- ವಿದೇಶಗಳಿಂದ ಅನೇಕ ಕಂಪನಿಗಳು ಬರಲಿವೆ. ಮುಂದಿನ ದಿನಗಳಲ್ಲಿ ಇದರಿಂದ ಕೈಗಾರಿಕಾ ಬೆಳವಣಿಗೆಯಾಗಲಿದೆ ಎಂದು ಸಚಿವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


