ಕರ್ನಾಟಕದ ಮೊದಲ ಕೋವಿಡ್ ಮುಕ್ತ ಜಿಲ್ಲೆ ಬೀದರ್: ಶೀಘ್ರದಲ್ಲೆ ಘೋಷಣೆ
ರಾಜ್ಯದಲ್ಲಿ ಕೋವಿಡ್ ಮುಕ್ತ ಮೊದಲ ಜಿಲ್ಲೆ ಬೀದರ್ ಎಂದು ಗುರುವಾರ ಹೇಳಲಾಗಿದೆ. ಸೆಪ್ಟಂಬರ್ 2 ರಂದು ಯಾವುದೇ ಕೊರೋನಾ ಕೇಸ್ ದಾಖಲಾಗಿಲ್ಲ.

ಬೀದರ್: ರಾಜ್ಯದಲ್ಲಿ ಕೋವಿಡ್ ಮುಕ್ತ ಮೊದಲ ಜಿಲ್ಲೆ ಬೀದರ್ ಎಂದು ಗುರುವಾರ ಹೇಳಲಾಗಿದೆ. ಸೆಪ್ಟಂಬರ್ 2 ರಂದು ಯಾವುದೇ ಕೊರೋನಾ ಕೇಸ್ ದಾಖಲಾಗಿಲ್ಲ.
ಸೋಂಕು ತಗುಲಿದ್ದ ರೋಗಿಗಳು ಮತ್ತು ಹೋಮ್ ಕ್ವಾರಂಟೈನ್ ನಲ್ಲಿದ್ದವರು ಚೇತರಿಸಿಕೊಂಡಿದ್ದಾರೆ, ಬೀದರ್ ಶೂನ್ಯ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಕೋವಿಡ್‌ನ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ, ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಬೀದರ್ ಜಿಲ್ಲೆಯು ಆತಂಕಕ್ಕೆ ಕಾರಣವಾಗಿತ್ತು ಎಂಬುದನ್ನು ಸ್ಮರಿಸಬಹುದು. ಆದರೆ ಕಳೆದ ಒಂದು ತಿಂಗಳಲ್ಲಿ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ.
ಕಳೆದ ಎರಡು ಕೋವಿಡ್ ಅಲೆಗಳಲ್ಲಿ ಜಿಲ್ಲೆಯಲ್ಲಿ 24,300 ಪಾಸಿಟಿವ್ ಪ್ರಕರಣಗಳು ದಾಖಲಾಗಿತ್ತು. ಸೋಂಕು ತಗುಲಿದ್ದ 23,898 ಜನರು ಚೇತರಿಸಿಕೊಂಡಿದ್ದು 398 ಜನರು ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ, 18 ವರ್ಷಕ್ಕಿಂತ ಮೇಲ್ಪಟ್ಟ 7,54,223 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಬಹುಶಃ ಹೆಚ್ಚಿನ ಜನರು ಲಸಿಕೆ ಪಡೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜನರು ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದಾರೆ, ಇದು ಜಿಲ್ಲೆಯು ಕೋವಿಡ್ ಮುಕ್ತವಾಗಲು ಕಾರಣವಾಗಿರಬಹುದು ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


