ರಾಜ್ಯ

ಗ್ಯಾಂಗ್ ರೇಪ್ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಂದು ಕೇಸ್: ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿ ಬೀಳಿಸಿದೆ.

ಗ್ಯಾಂಗ್ ರೇಪ್ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಂದು ಕೇಸ್: ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ
ಸಾಂದರ್ಭಿಕ ಚಿತ್ರ
Published On :

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿ ಬೀಳಿಸಿದೆ.

ನಗರದ ಆರ್​ ಎಸ್​ ನಾಯ್ದು ನಗರದ  ಪ್ರಮುಖ ರಸ್ತೆಯಲ್ಲಿನ ಸ್ಟಡಿ ಹೌಸ್​ಗೆ ನುಗ್ಗಿ ವ್ಯಕ್ತಿಯೊಬ್ಬ ಹಾಡಹಗಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಮುಖ್ಯರಸ್ತೆಯಿಂದ ಸ್ವಲ್ಪವೇ ದೂರ ಇರುವ ಸ್ಟಡಿ ಹೌಸ್ ಗೆ ಬೆಳಗ್ಗೆ 11.30ರ ವೇಳೆ ಆರೋಪಿ ಬಂದಿದ್ದಾನೆ, ವಿದ್ಯಾರ್ಥಿನಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆತ ಆಕೆಯನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ವೇಳೆ ಒಳ ನುಗ್ಗಿದ್ದಾನೆ ಎಂದು ಮೂಲಗಗಳು ತಿಳಿಸಿವೆ.  ಈ ವೇಳೆ ವಿದ್ಯಾರ್ಥಿನಿ ಕಿರುಚಿಕೊಂಡ ಪರಿಣಾಮ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾಗಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಘಟನೆ ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಎನ್​ ಆರ್​ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಡಿಸಿಪಿ ಪ್ರದೀಪ್​ ಗುಂಟಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳಗಳ ಸಿಸಿಟಿವಿ ಸೇರಿದಂತೆ ಇತರೆ ಮಾಹಿತಿ ಸಂಗ್ರಹಿಸಿದ ಪೊಲೀಸರು ತಕ್ಷಣಕ್ಕೆ ಕಾರ್ಯ ಪ್ರವೃತ್ತರಾಗಿ ಕೆಲವೇ ಗಂಟೆಯಲ್ಲಿ ಆರೋಪಿಯನ್ನು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೂರಿನ ಹಿನ್ನಲೆ ಪ್ರಕರಣ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ಹೇಳಿಕೆ ಕೂಡ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.