ರಾಜ್ಯ

ಮೈಸೂರು: ಮುಖ್ಯಪೇದೆ ಸರವನ್ನೇ ಕದ್ದ ಖತರ್ನಾಕ್; ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!

ಮುಖ್ಯಪೇದೆಯ ಸರ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದೊಪ್ಪಿಸಿದ ಘಟನೆ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ.

ಮೈಸೂರು: ಮುಖ್ಯಪೇದೆ ಸರವನ್ನೇ ಕದ್ದ ಖತರ್ನಾಕ್; ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!
ಸಾಂದರ್ಭಿಕ ಚಿತ್ರ
Published On :

ಮೈಸೂರು: ಮುಖ್ಯಪೇದೆಯ ಸರ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದೊಪ್ಪಿಸಿದ  ಘಟನೆ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ.

ರಾತ್ರಿ 9,30ರ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಮುಖ್ಯ ಪೇದೆ ಇಲಿಯಾಸ್ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಪೇದೆಯ ಕತ್ತಿನಲ್ಲಿದ್ದ ಸರವನ್ನು ಕಸಿದು ಓಡುತ್ತಿದ್ದ, ಇದನ್ನು ಗಮನಿಸಿದ ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿ ಆತನನ್ನು ಹಿಂಬಾಲಿಸಿದ್ದಾರೆ, ಕೂಡಲೇ ಕಳ್ಳ ಪಾರ್ಕ್ ಗೆ ಓಡಿ ಹೋಗಿ ಅಲ್ಲಿ ಅವಿತು ಕುಳಿತಿದ್ದ, ಅಲ್ಲಿಯೇ ಇದ್ದ ಕೆಲವು ಯುವಕರು ಕಳ್ಳನನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ.

ಆತನೊಬ್ಬ ಸರಣಿ ಸರ ಕಳ್ಳನಾಗಿದ್ದು, ಲಷ್ಕರ್ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದ್ದಾರೆ. ಆದರೆ ಮುಖ್ಯಪೇದೆ ಆರೋಪಿ ವಿರುದ್ಧ ದೂರು ದಾಖಲಿಸಲಿಲ್ಲ, ಇದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.