ರಾಜ್ಯ

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ಪತ್ತೆ

ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ವೊಂದು ಭಾನುವಾರ ಪತ್ತೆಯಾಗಿದ್ದು, ಜನರು ಆತಂಕಗೊಂಡಿದ್ದರು.

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ಪತ್ತೆ
ಮೆಟ್ರೋ ನಿಲ್ದಾಣದಲ್ಲಿ ಪತ್ತೆಯಾದ ಬ್ಯಾಗ್
Published On :

ಬೆಂಗಳೂರು: ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ​ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲ ಕಾಲ ಕೆಲಕಾಲ ಆತಂಕಕ್ಕೊಳಗಾಗಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ  ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.

ಮೆಟ್ರೊ ನಿಲ್ದಾಣದ ನಾರ್ತ್ ಗೇಟ್​ನ ಮೆಟ್ಟಿಲುಗಳ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ತಕ್ಷಣವೇ ಮೆಟ್ರೊ ಸಿಬ್ಬಂದಿ ಬ್ಯಾಗ್ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಾಂಬ್ ನಿಷ್ಕ್ರಿಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಟ್ರಾಲಿ ಬ್ಯಾಗ್ ನಲ್ಲಿ ಬಟ್ಟೆ ಇರುವುದು ತಿಳಿದು ಬಂದಿದೆ. ಬೈಯಪ್ಪನಹಳ್ಳಿ ಪೊಲೀಸರು ಸಮೀಪದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ, ಮಹಿಳೆಯೊಬ್ಬರು ಸ್ಥಳದಲ್ಲೇ ಟ್ರಾಲಿ ಬ್ಯಾಗ್ ​​ ಬಿಟ್ಟು ಹೋಗಿರುವುದು ಗೊತ್ತಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.