ಕೋವಿಡ್-19: ರಾಜ್ಯದಲ್ಲಿಂದು 1,117 ಹೊಸ ಪ್ರಕರಣ ಪತ್ತೆ, 1,354 ಚೇತರಿಕೆ, 8 ಸಾವು ದಾಖಲು
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,117 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2, 95, 5164 ಆಗಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,117 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ
ಒಟ್ಟು ಸೋಂಕಿತರ ಸಂಖ್ಯೆ 2, 95, 5164 ಆಗಿದೆ.
1, 354 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,90,0228ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 17501 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು 8 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 37409 ಆಗಿದೆ. ರಾಜ್ಯದಲ್ಲಿನ ಸೋಂಕಿನ ಪ್ರಮಾಣ ಶೇ. 071 ರಷ್ಟಿದ್ದು, ಮರಣ ಪ್ರಮಾಣ ಶೇ. 0.71 ರಷ್ಟಿದೆ.
ಬೆಂಗಳೂರಿನಲ್ಲಿ 358 ಹೊಸ ಪ್ರಕರಣ ಪತ್ತೆಯಾಗಿದ್ದು, 530 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಮರಣ ಪ್ರಮಾಣದಲ್ಲಿ ಇಳಿಕೆ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


