5 ದಿನಗಳ ಕಾಲ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರದಿಂದ ಷರತ್ತುಬದ್ದ ಅನುಮತಿ..!: ಇಷ್ಟಕ್ಕೂ ಷರತ್ತುಗಳೇನು..? ಇಲ್ಲಿದೆ ಮಾಹಿತಿ
ಹಲವು ಒತ್ತಡಗಳ ನಡುವೆಯೇ ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಬೆಂಗಳೂರು: ಹಲವು ಒತ್ತಡಗಳ ನಡುವೆಯೇ ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.
ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ: ತಾವೇ ಮಾಡಿದ್ದ ಹಾರ-ತುರಾಯಿ ನಿಷೇಧ ನಿಯಮ ಉಲ್ಲಂಘಿಸಿದ ಸಿಎಂ ಬೊಮ್ಮಾಯಿ..?
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು, ʼಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗುವುದು ಎಂದು ಹೇಳಿದರು.
Karnataka Government gives approval to celebrate Ganeshotsava for 5 days. One Ganesha pendal per ward in urban areas and one pendal per village in rural areas. Ganesha events not at schools and colleges says revenue Minister R Ashok@NewIndianXpress@santwana99@ramupatil_TNIE
— Ashwini M Sripad/ಅಶ್ವಿನಿ ಎಂ ಶ್ರೀಪಾದ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


