ವಿಜಯಪುರ, ಬಾಗಲಕೋಟೆಗಳಲ್ಲಿ ಕಡಿಮೆ ತೀವ್ರತೆಯ ಭೂಕಂಪನ
ವಿಜಯಪುರ, ಬಾಗಲಕೋಟೆಗಳಲ್ಲಿ ಸೆ.04 ರಂದು ಮಧ್ಯರಾತ್ರಿ ಕಡಿಮೆ ತೀವ್ರತೆಯ ಭೂಕಂಪನ ವರದಿಯಾಗಿದೆ.

ಬೆಂಗಳೂರು: ವಿಜಯಪುರ, ಬಾಗಲಕೋಟೆಗಳಲ್ಲಿ ಸೆ.04 ರಂದು ಮಧ್ಯರಾತ್ರಿ ಕಡಿಮೆ ತೀವ್ರತೆಯ ಭೂಕಂಪನ ವರದಿಯಾಗಿದೆ. ಕರ್ನಾಟಕ ರಾಜ್ಯ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು ಕೊಲ್ಹಾಪುರ ಜಿಲ್ಲೆಯಲ್ಲಿ 3.9 ತೀವ್ರತೆ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕಡಿಮೆ ತೀವ್ರತೆಯ ಕಂಪನ ಅನುಭವಕ್ಕೆ ಬಂದಿದೆ.
ವಿಜಯಪುರ ನಗರ, ಬಸವನ ಬಾಗೇವಾಡಿ, ಟಿಕೊಟಾ, ಇಂಡಿ, ಸಿಂಧಗಿಯಲ್ಲಿನ ಜನರು ರಾತ್ರಿ 11:30 ಕ್ಕೆ ಕಂಪನವಾಗುತ್ತಿದ್ದಂತೆಯೇ ಮನೆಯಿಂದ ಹೊರಬರಲಾರಂಭಿಸಿದರು. ಆದರೆ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ಮಾಹಿತಿ ಬಂದಿಲ್ಲ.
ಕೀರ್ತಿ ನಗರದ ನಿವಾಸಿ ಶೇಖರಾಜ್ ಪಾಟೀಲ್ ಈ ಬಗ್ಗೆ ಮಾತನಾಡಿದ್ದು, "ಆಗ ನಿದ್ದೆ ಮಾಡುವ ಸಮಯವಾಗಿತ್ತು, ಕಂಪನದ ಅನುಭವವಾಗುತ್ತಿದ್ದಂತೆಯೇ ಕುಟುಂಬ ಸದಸ್ಯರು ಮನೆಯಿಂದ ಹೊರಬರಲಾರಂಭಿಸಿದೆವು. ಅರ್ಧಗಂಟೆಯ ಅವಧಿಯಲ್ಲಿ 2 ಕಂಪನಗಳ ಅನುಭವವಾಗಿತ್ತು ಎಂದು ಹೇಳಿದ್ದಾರೆ.
ಡಿ.ಸಿ ಸುನಿಲ್ ಕುಮಾರ್ ಮಾತನಾಡಿದ್ದು, "ವಿಪತ್ತು ನಿಗಾ ಕೇಂದ್ರ ಕಡಿಮೆ ತೀವ್ರತೆಯ ಕಂಪನ ವರದಿಯಾಗಿದೆ. ಜನತೆ ಆತಂಕ ಪಡುವ ಅಗತ್ಯವಿಲ್ಲ ಕೆಎಸ್ ಎನ್ ಡಿಎಂಸಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ" ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


