ರಾಜ್ಯ

ಕೊಳ್ಳೆಗಾಲ ಶಾಸಕ ಎನ್ ಮಹೇಶ್ ಗೆ ಪತ್ನಿ ವಿಯೋಗ

ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರಿಗೆ ಪತ್ನಿ ವಿಯೋಗವಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ವಿಜಯಾ (64) ಅವರು ಭಾನುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಳ್ಳೆಗಾಲ ಶಾಸಕ ಎನ್ ಮಹೇಶ್ ಗೆ ಪತ್ನಿ ವಿಯೋಗ
ಎನ್ ಮಹೇಶ್ ಮತ್ತು ವಿಜಯಾ ದಂಪತಿ
Published On :

ಕೊಳ್ಳೇಗಾಲ: ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರಿಗೆ ಪತ್ನಿ ವಿಯೋಗವಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ  ಪತ್ನಿ ವಿಜಯಾ (64) ಅವರು ಭಾನುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ವಿಜಯಾ ಅವರು ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.30 ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಮಂಡ್ಯ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಜಯಾ ಅವರು ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. 

ಕ್ಯಾನ್ಸರ್ ನಿಂದ ಬಳಲುತ್ತಿದ್ದ ವಿಜಯಾ
ಮೂಲಗಳ ಪ್ರಕಾರ ಮಹೇಶ್ ಅವರ ಪತ್ನಿ ವಿಜಯಾ ಅವರು, ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿನ ಅಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ತಡರಾತ್ರಿ 11 ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ. 

ಮಹೇಶ್ ಮತ್ತು ವಿಜಯಾ ದಂಪತಿಗೆ ಓರ್ವ ಪುತ್ರನಿದ್ದು, ಕಳೆದ ಒಂದು ವರ್ಷದ ಹಿಂದೆಯಷ್ಟೇ ಮಗನಿಗೆ ಮದುವೆ ಮಾಡಲಾಗಿತ್ತು.

ಕಾನ್ಶಿ ಫೌಂಡೇಷನ್‌ನಲ್ಲಿ ಅಂತ್ಯಕ್ರಿಯೆ
ವಿಜಯಾ ಅವರ ಅಂತ್ಯಕ್ರಿಯೆಯನ್ನು ಇಂದು ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು,  ಬೆಂಗಳೂರಿನ ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಶಿ ಫೌಂಡೇಶನ್‌ನಲ್ಲಿ ಶಾಸಕ ಎನ್.ಮಹೇಶ್‌ರ ಪತ್ನಿ ವಿಜಯಾ ಮಹೇಶ್ ಅಂತ್ಯಕ್ರಿಯೆ ನೆರವೇರಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.