ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: 7ನೇ ಆರೋಪಿ ಬಂಧನ
ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಮಂಗಳವಾರ...

ಬೆಂಗಳೂರು: ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 7ಕ್ಕೆ ಏರಿಕೆ ಆಗಿದೆ.
ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ತಮಿಳುನಾಡು ಪೊಲೀಸರ ಸಹಾಯದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು ರಾತ್ರಿ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಘಟನೆ ನಡೆದ 4 ದಿನಗಳ ನಂತರ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದರು. ವಿಚಾರಣೆ ವೇಳೆ 7 ಜನ ಸೇರಿ ಈ ಕೃತ್ಯ ಎಸಗಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ಬಳಿಕ ಕಾರ್ಯಾಚರಣೆ ನಡೆಸಿ 6ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ, 7ನೇ ಆರೋಪಿ ಬಹುದಿನಗಳಿಂದ ಪೊಲೀಸರ ಕೈಗೆ ಸಿಗದೇ ತಲೆಮರಿಸಿಕೊಂಡಿದ್ದ. ಇದೀಗ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಕರಣದ 7 ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನು ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳನ್ನು ಮಂಗಳವಾರ ಮೈಸೂರಿನ ಮೂರನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಬಾಲಪರಾಧಿಯಾಗಿರುವುದರಿಂದ ಆತನನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


