ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಕರ್ಯ: ವರದಿ ಸಲ್ಲಿಸಲು ಅ.8ರ ಗಡುವು ನಿಗದಿಪಡಿಸಿದ ಹೈಕೋರ್ಟ್
ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್‌ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

ಬೆಂಗಳೂರು: ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್‌ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.
ಎಸಿಬಿ ನಿಗದಿತ ಗಡುವಿನಲ್ಲಿ ತನಿಖೆಯ ವರದಿ ಸಲ್ಲಿಸುವಲ್ಲಿ ವಿಫಲವಾದರೆ. ಮುಂದಿನ ವಿಚಾರಣೆಯ ನಡೆಯುವ ಅಕ್ಟೋಬರ್ 8ರಂದು ಗೃಹ ಇಲಾಖೆಯ ಕಾರ್ಯದರ್ಶಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಹೈಕೋರ್ಟ್ ಹೇಳಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ಚೆನ್ನೈನ ಅಲ್ವಾರ್‌ಪೇಟೆಯ ಸಾಮಾಜಿಕ ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಕೆಎಸ್ ಗೀತಾ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ನೀಡಿದೆ.
2014ರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಿವಗಂತ ಜೆ ಜಯಲಲಿತಾ ಜೊತೆಗೆ ಸಹ ಆರೋಪಿ ಎನಿಸಿ, ನಂತರ ಆರೋಪ ಸಾಬೀತಾಗಿದ್ದರಿಂದ ಅಪರಾಧಿಯಾಗಿ ಶಶಿಕಲಾ ಅವರು ಶಶಿಕಲಾ ಅವರು 2017ರ ಫೆಬ್ರುವರಿ 15ರಂದು ಪೊಲೀಸರಿಗೆ ಶರಣಾಗಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆ ಅನುಭವಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


