ರಾಜಕಾರಣಿಗಳು ಕನಕದಾಸರನ್ನು ಹೈಜಾಕ್ ಮಾಡಲು ಬಿಡಬಾರದು: ಚೇತನ್ ಟ್ವಿಟ್ ನ ಮರ್ಮವೇನು?
ಕೆಲ ದಿನಗಳ ಹಿಂದಷ್ಟೇ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 'ಜಾತಿ ನಾಯಕ' ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಇಂದು, ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸಿಕೊಳ್ಳುವ ಸ್ವ- ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈ ಜಾಕ್ ಮಾಡಲು ಬಿಡಬಾರದು ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 'ಜಾತಿ ನಾಯಕ' ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಇಂದು, ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸಿಕೊಳ್ಳುವ ಸ್ವ- ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈ ಜಾಕ್ ಮಾಡಲು ಬಿಡಬಾರದು ಎಂದು ಟ್ವೀಟ್ ಮಾಡಿದ್ದಾರೆ.
ಕನದಾಸರು 16 ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸನ್ನು ಕಂಡಿದ್ದರು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ್ದ ಕನಕದಾಸರು, ಜಾತಿ, ಧರ್ಮ, ಲಿಂಗವನ್ನು ಮೀರಿದ್ದ ನಮೆಲ್ಲರಿಗೂ ಸೇರಿದವರಾಗಿದ್ದಾರೆ ಎಂದು ಚೇತನ್ ಹೇಳಿದ್ದಾರೆ. ಚೇತನ್ ಮಾಡಿರುವ ಈ ಟ್ವಿಟ್ ಮರ್ಮವೇನು ಎಂಬುದು ಗೊತ್ತಾಗಿಲ್ಲ.
ಕಳೆದ ಶನಿವಾರ ಟ್ವೀಟ್ ಮಾಡಿದ್ದ ಚೇತನ್, ಸಿದ್ದರಾಮಯ್ಯ ಕರ್ನಾಟಕ ಮತ್ತು ಕಾಂಗ್ರೆಸ್ ನ ಪ್ರಬಲ ನಾಯಕ. ಆದರೆ. ಬ್ರಾಹ್ಮಣ್ಯವನ್ನು ಆಳವಾಗಿ ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ ಎಂದಿದ್ದರು.
ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ಜಾತಿ ವಿರೋಧಿ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯ ಅವರ ಸೇವೆ ಹುಟ್ಟಿದ ಜಾತಿಗೆ ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ ಎಂದು ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


