ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರು ಕೈಬಿಟ್ಟಿದ್ದರ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀಗೆ ಪರವಾಗಿ ಯಾವ ರಾಜಕೀಯ ನಾಯಕರೂ ನಮ್ಮ ಮೇಲೆ ಒತ್ತಡ ತರುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಳಗಾವಿ: ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀಗೆ ಪರವಾಗಿ ಯಾವ ರಾಜಕೀಯ ನಾಯಕರೂ ನಮ್ಮ ಮೇಲೆ ಒತ್ತಡ ತರುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ಸೇವನೆ ಪ್ರಕರಣದ ಚಾರ್ಜ್ಶೀಟ್ನಲ್ಲಿ ನಿರೂಪಕಿ ಅನುಶ್ರೀ ಹೆಸರು ಕೈಬಿಟ್ಟ ಉಹಾಪೋಹ ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಳಗಾವಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದು, ನಿರೂಪಕಿ ಅನುಶ್ರೀ ಹೆಸರು ಕೈಬಿಟ್ಟಿರುವ ವಿಚಾರ ನಂಗೆ ಗೊತ್ತಿಲ್ಲ. ಅಧಿಕಾರಿಗಳನ್ನು ಕೇಳಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು,
ಅಂತೆಯೇ ಡ್ರಗ್ಸ್ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅನುಶ್ರೀಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ಯಾವ ರಾಜಕೀಯ ನಾಯಕರೂ ನಮ್ಮ ಮೇಲೆ ಒತ್ತಡ ತರುತ್ತಿಲ್ಲ. ಡ್ರಗ್ಸ್ ಪ್ರಕರಣದಲ್ಲಿ ರಾಜಕೀಯ ನಾಯಕರು ಆರೋಪಿಗಳ ಬಚಾವ್ ಮಾಡಲು ಒತ್ತಡ ಹಾಕಲ್ಲ. ಡ್ರಗ್ಸ್ ಸೇವನೆ, ಪೂರೈಕೆ ಪ್ರಕರಣ ಗಂಭೀರವಾದದ್ದು. ಎಂಥ ಪ್ರಭಾವಿಗಳಾಗಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಖಚಿತ. ನಿರೂಪಕಿ ಅನುಶ್ರೀ ಕೇಸ್ನಲ್ಲಿ ನಮಗೆ ರಾಜಕೀಯ ಒತ್ತಡಗಳಿಲ್ಲ. ನಮ್ಮ ಪೊಲೀಸರು ಇಂತಹ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ. ಅನುಶ್ರೀ ಹೆಸರನ್ನು ಕೈಬಿಟ್ಟಿದ್ದರೆ, ಆ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


