ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸುತ್ತಿದ್ದ ಆರು ಮಂದಿ ಬಂಧನ
ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉಪಕರಣಗಳನ್ನು ಮಾರಾಟ ಮಾಡಿ ಹಣ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸುತ್ತಿದ್ದ ಗ್ಯಾಂಗ್ ವೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉಪಕರಣಗಳನ್ನು ಮಾರಾಟ ಮಾಡಿ ಹಣ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸುತ್ತಿದ್ದ ಗ್ಯಾಂಗ್ ವೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಶೇಖ್ ನೂರ್ ಅಹಮದ್ (61), ಜರೀನಾ ಅಹಮದ್ ಹಾಗೂ ಬೆಂಗಳೂರಿನ ರಾಘವೇಂದ್ರ ಪ್ರಸಾದ್, ನಯೀಂವುಲ್ಲಾ, ಮುದಾಸೀರ್ ಅಹಮದ್ ಹಾಗೂ ಫರೀದಾ ಬಂಧಿತ ಆರೋಪಿಗಳು.
ಶೇಖ್ ಪತ್ನಿ ಜರೀನಾ, ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ವೊಂದರಲ್ಲಿ ಕಳೆದ 2 ತಿಂಗಳಿನಿಂದ ರೂಂ ಬುಕ್ ಮಾಡಿಕೊಂಡು ಸಭೆಗಳನ್ನು ನಡೆಸಿ, ರೈಸ್ ಪುಲ್ಲಿಂಗ್ ಉಪಕರಣಗಳಿದ್ದು, ಅವುಗಳನ್ನು ಮಾರಾಟ ಮಾಡಿದರೆ ಕೋಟ್ಯಾಂತರ ರೂ ಹಣಗಳಿಸಬಹುದು ಎಂದು ಆಮಿಷವೊಡ್ಡುತ್ತಿದ್ದಳು. ನಂತರ ಬಂದ ಹಣದಲ್ಲಿ ತಮಗೂ ಕೂಡ ಹೆಚ್ಚಿನ ಹಣ ನೀಡುವುದಾಗಿ ಬೆಂಗಳೂರಿನ ನಾಲ್ವರು ಆರೋಪಿಗಳು ಸಾರ್ವಜನಿಕರೊಂದಿಗೆ ಸಭೆ ನಡೆಸಿ ಅವರನ್ನು ಪ್ರೇರೆಪಿಸುತ್ತಿದ್ದರು.
ಬಳಿಕ ಅಕ್ರಮವಾಗಿ ಸಾಮಾಜಿಕ ಜಾಲತಾಣದಲ್ಲಿ ರೈಸ್ ಪುಲ್ಲಿಂಗ್ ಉಪಕರಣಗಳ ವಿಡಿಯೋ, ಚಿತ್ರಗಳನ್ನು ತೋರಿಸಿ, ಸಾರ್ವಜನಿಕರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದರು. ಈ ಕುರಿತು ದೂರು ದಾಖಲಾದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


