ರಾಜ್ಯ

ವಸತಿ ಯೋಜನೆ: 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು  ಸಿಎಂ ಸೂಚನೆ

ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.

ವಸತಿ ಯೋಜನೆ: 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು  ಸಿಎಂ ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. 

ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ  ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. 

ಅದರಂತೆ  ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ 4  ಲಕ್ಷ ಹೊಸ ಮನೆಗಳಿಗೆ ಎದುರಾಗಿ   ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.