ಕೋವಿಡ್-19: ರಾಜ್ಯದಲ್ಲಿಂದು 803 ಹೊಸ ಪ್ರಕರಣ, 802 ಗುಣಮುಖ, 17 ಸಾವು ದಾಖಲು
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 803 ಕೋವಿಡ್-19 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 2,96,1735ಕ್ಕೆ ಏರಿಕೆಯಾಗಿದೆ. 802 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 803 ಕೋವಿಡ್-19 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 2,96,1735ಕ್ಕೆ ಏರಿಕೆಯಾಗಿದೆ. 802 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಾಂಕ್ರಾಮಿಕದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2,90,7548 ಆಗಿದೆ. ರಾಜ್ಯದಲ್ಲಿ ಸದ್ಯ 16,656 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು 17 ಮಂದಿ ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 37504ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.80 ರಷ್ಟಿದ್ದು, ಮರಣ ಪ್ರಮಾಣ ಶೇ. 2.11 ರಷ್ಟಿದೆ.
ಬೆಂಗಳೂರಿನಲ್ಲಿ 255 ಹೊಸ ಪ್ರಕರಣ ಪತ್ತೆಯಾಗಿದ್ದು, 107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
6 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


