ರಾಜ್ಯ

ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಆರೋಪ: ನಾಲ್ವರು ಶಂಕಿತರ ಬಂಧನ

ಜಿಲ್ಲೆಯ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೋದಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದರ ಕುರಿತು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ.ವೇದಮೂರ್ತಿ ತಿಳಿಸಿದ್ದಾರೆ.

ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಆರೋಪ: ನಾಲ್ವರು ಶಂಕಿತರ ಬಂಧನ
ಸ್ಥಳ ಮಹಜರಿಗೆ ಆರೋಪಿಗಳನ್ನು ಕರೆತಂದ ಪೊಲೀಸರು
Published On :

ಯಾದಗಿರಿ: ಜಿಲ್ಲೆಯ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೋದಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದರ ಕುರಿತು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ.ವೇದಮೂರ್ತಿ ತಿಳಿಸಿದ್ದಾರೆ.

ಯುವಕರು ಮಹಿಳೆಯನ್ನು ನಗ್ನಗೊಳಿಸಿ ಥಳಿಸುತ್ತಿದ್ದಾರೆ. ಕಾಲಿಗೆ ಬೀಳುತ್ತೇನೆ ಅಣ್ಣ ಹೊಡೆಯಬೇಡಿ ಎಂದು ಮಹಿಳೆ ಅಂಗಲಾಚುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ, ಕೃತ್ಯಕ್ಕೆ ಸಂಬಂಧಿಸಿದಂತೆ ಶಹಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಈ ಕುರಿತು ತನಿಖೆ ನಡೆಯುತ್ತಿದೆ. ಸದ್ಯ ವಿಡಿಯೋದಲ್ಲಿದ್ದ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಪತ್ತೆಯಾದರೆ ಇವರ ಕಡೆಯಿಂದ ದೂರು ಪಡೆಯಲಾಗುವುದು. ಇಲ್ಲದಿದ್ದರೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು ಎಂದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಲಾಗಿದೆ. ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ‌. ಶೀಘ್ರವೇ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಇದು 8 ರಿಂದ 9 ತಿಂಗಳ ಹಿಂದೆ ನಡೆದಿರುವ ಘಟನೆಯಾಗಿದ್ದು,ಇದು ಹಳೆಯ ವಿಡಿಯೋ. ಈಗಾಗಲೇ ಶಂಕಿತ ನಾಲ್ವರನ್ನು ವಶಕ್ಕೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.