ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಬದಲಿ ವಿಮಾನ ವ್ಯವಸ್ಥೆ
ವಿಮಾನ ಹಾರಾಟ ನಡೆಸುವ ಮುನ್ನ ಚಾಲಕ ನಡೆಸಿದ ಅಂತಿಮ ತಪಾಸಣೆ ವೇಳೆ ತಾಂತ್ರಿಕ ದೋಷ ಪತ್ತೆಯಾಗಿತ್ತು.

ಬೆಂಗಳೂರು: ಬೆಂಗಳೂರಿನಿಂದ ಹೈದರಾಬಾದಿಗೆ ಪ್ರಯಾಣಿಸುತ್ತಿದ್ದ ಅಲಯನ್ಸ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನದಲ್ಲಿ ತಾಂತ್ರಿಕ ದೋಷ ಇರುವುದನ್ನು ಚಾಲಕ ಪತ್ತೆ ಹಚ್ಚಿದ್ದು ಸಂಭಾವ್ಯ ಅವಘಡ ತಪ್ಪಿಸಿದ ಘಟನೆ ನಡೆದಿದೆ.
ವಿಮಾನದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು. ವಿಮಾನ ಹಾರಾಟ ನಡೆಸುವ ಮುನ್ನ ಚಾಲಕ ನಡೆಸಿದ ಅಂತಿಮ ತಪಾಸಣೆ ವೇಳೆ ತಾಂತ್ರಿಕ ದೋಷ ಪತ್ತೆಯಾಗಿತ್ತು.
ನಂತರ ದೋಷಪೂರಿತ ವಿಮಾನದಿಂದ ಪ್ರಯಾಣಿಕರನ್ನು ಸ್ಥಳಾಂತರಿಸಿ ಬದಲಿ ವಿಮಾನ ವ್ಯವಸ್ಥೆ ಮಾಡಲಾಯಿತೆಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.
Related Article
ಉತ್ತರಪ್ರದೇಶ ಚುನಾವಣೆ: ಸಹ ಪ್ರಭಾರಿ ಆಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ
'ರೈತರೊಂದಿಗೆ ಚರ್ಚೆಗೆ ಕೇಂದ್ರ ಸಿದ್ಧ, ದೇಶದಾದ್ಯಂತ 10 ಸಾವಿರ ಕೃಷಿ ಉತ್ಪಾದಕರ ಸಂಘ ಸ್ಥಾಪನೆ': ಶೋಭಾ ಕರಂದ್ಲಾಜೆ
ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಎಫ್ ಪಿ ಒ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ: ಶೋಭಾ ಕರಂದ್ಲಾಜೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


