ರಾಜ್ಯ

ದೇವಸ್ಥಾನ ಒಡೆಯಲು ತರಾತುರಿ ಬೇಡ; 2 ದಿನಗಳಲ್ಲಿ ಸ್ಪಷ್ಟ ನಿರ್ದೇಶನ: ಸಿಎಂ ಬಸವರಾಜ ಬೊಮ್ಮಾಯಿ

ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೇವಸ್ಥಾನ ಒಡೆಯಲು ತರಾತುರಿ ಬೇಡ; 2 ದಿನಗಳಲ್ಲಿ ಸ್ಪಷ್ಟ ನಿರ್ದೇಶನ: ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Published On :

ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ ಎಂದರು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ನೋಟಿಸ್ ನೀಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. 

ಅವಸರದ ತೀರ್ಮಾನ ತೆಗೆದುಕೊಂಡು ರಾಜ್ಯದಲ್ಲಿನ ದೇವಾಲಯಗಳನ್ನು ಒಡೆಯುವ ಕೆಲಸ ಮಾಡಬಾರದು. ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚಿಸಿ ಎರಡು ದಿನಗಳಲ್ಲಿ ನಿರ್ದಿಷ್ಟ ಸೂಚನೆ ನೀಡಲಾಗುವುದು. ಸದನ ನಡೆಯುತ್ತಿರುವುದರಿಂದ ಎಲ್ಲ ವಿರಗಳನ್ನು ಸದನಕ್ಕೆ ನೀಡಲಾಗುವುದು ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.