ಹಾಸನ: ಶೇ.100 ರಷ್ಟು ಲಸಿಕೆ ಗುರಿ ತಲುಪಲು ಮನೆ ಬಾಗಿಲಿಗೆ ಲಸಿಕೆ ಅಭಿಯಾನ
ಹಾಸನ ಜಿಲ್ಲಾಡಳಿತ ಶೇ.100 ರಷ್ಟು ಲಸಿಕೆ ಗುರಿ ಹೊಂದಿದ್ದು ಈ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಲಸಿಕೆ ಅಭಿಯಾನ ಪ್ರಾರಂಭಿಸಿದೆ.

ಹಾಸನ: ಹಾಸನ ಜಿಲ್ಲಾಡಳಿತ ಶೇ.100 ರಷ್ಟು ಲಸಿಕೆ ಗುರಿ ಹೊಂದಿದ್ದು ಈ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಲಸಿಕೆ ಅಭಿಯಾನ ಪ್ರಾರಂಭಿಸಿದೆ.
ಇದಕ್ಕಾಗಿ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಿರಿಯ ನರ್ಸ್, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಹಾಯಕರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿದೆ.
ವಿಶೇಷ ತಂಡಗಳು ಮೊದಲ ಹಂತದಲ್ಲಿ ಪ್ರತಿ ತಾಲೂಕಿನಲ್ಲೂ 100 ಗ್ರಾಮಗಳಿಗೆ ಭೇಟಿ ನೀಡಲಿದೆ. ಅಧಿಕಾರಿಗಳ ಡೇಟಾ ಪ್ರಕಾರ 1,335 ಮಂದಿ ಜಿಲ್ಲೆಯಲ್ಲಿ ಕೋವಿಡ್-19 ಕಾರಣದಿಂದ ಮೃತಪಟ್ಟಿದ್ದಾರೆ.
1.1 ಲಕ್ಷ ಮಂದಿ ಜಿಲ್ಲೆಯಲ್ಲಿ ಕೋವಿಡ್-19 ನಿಂದ ಚೇತರಿಸಿಕೊಂಡಿದ್ದು 562 ಪಾಸಿಟೀವ್ ಪ್ರಕರಣಗಳಿವೆ. ಕಳೆದ 15 ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಆರೋಗ್ಯ ಇಲಾಖೆ ಹೆಚ್ಚು ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿದ್ದು ಜನತೆ ಲಸಿಕೆ ಕೇಂದ್ರಗಳಿಗೆ ತೆರಳುತ್ತಿದ್ದಂತೆಯೇ ಲಸಿಕೆ ಪಡೆದುಕೊಳ್ಳಬಹುದಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಅವರ ಮಾಹಿತಿಯ ಪ್ರಕಾರ, ಮನೆ ಬಾಗಿಲಿಗೆ ಲಸಿಕೆ ಅಭಿಯಾನವನ್ನು ಹಾಸನ ನಗರದ ಪ್ರದೇಶಗಳ ಬಳಿ ಇರುವ ಗ್ರಾಮಗಳಲ್ಲಿ ಪ್ರಾರಂಭಿಸಲಾಗಿದೆ. ಮುಂದಿನ 10 ದಿನಗಳಲ್ಲಿ 1 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಜಿಲ್ಲಾಧಿಕಾರಿ ಆರ್ ಗಿರೀಶ್ ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲನೆ ಮಾಡಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


