ರಾಜ್ಯ

ರಾಜ್ಯದಲ್ಲಿ ಕೊರೋನಾ ತುಸು ಹೆಚ್ಚಳ: 1,108 ಹೊಸ ಪ್ರಕರಣ ಪತ್ತೆ, 809 ಸೋಂಕಿತರು ಗುಣಮುಖ, 18 ಮಂದಿ ಸಾವು

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಾ ಸಾಗಿದ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ತುಸು ಹೆಚ್ಟಳ ಕಂಡುಬಂದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,108 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,96,5191ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ತುಸು ಹೆಚ್ಚಳ: 1,108 ಹೊಸ ಪ್ರಕರಣ ಪತ್ತೆ, 809 ಸೋಂಕಿತರು ಗುಣಮುಖ, 18 ಮಂದಿ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಾ ಸಾಗಿದ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ತುಸು ಹೆಚ್ಟಳ ಕಂಡುಬಂದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,108 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,96,5191ಕ್ಕೆ ಏರಿಕೆಯಾಗಿದೆ. 

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಇಂದು 809 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2.91,1434 ಆಗಿದೆ. ರಾಜ್ಯದಲ್ಲಿ ಸದ್ಯ 16,174 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು 18 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 37,555ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇಕಡಾ 0.66 ರಷ್ಟಿದ್ದು, ಮರಣ ಪ್ರಮಾಣ ಶೇ. 1.62 ರಷ್ಟಿದೆ.

ಬೆಂಗಳೂರಿನಲ್ಲಿ 308 ಹೊಸ ಪ್ರಕರಣ ದೃಢಪಟ್ಟಿದ್ದು, 203 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಐದು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 7428 ಸಕ್ರಿಯ ಪ್ರಕರಣಗಳಿವೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.