ರಾಜ್ಯ

ಸ್ವಯಂ ನಿವೃತ್ತಿ ಬಯಸಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ ಸಲ್ಲಿಕೆ: ಮೂಲಗಳು

ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ರೈಲ್ವೆ ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಸ್ವಯಂ ನಿವೃತ್ತಿ ಬಯಸಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ ಸಲ್ಲಿಕೆ: ಮೂಲಗಳು
ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
Published On :

ಬೆಂಗಳೂರು: ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.  ರೈಲ್ವೆ  ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ವೈಯಕ್ತಿಕ ಕಾರಣದಿಂದ ಸ್ವಯಂ ನಿವೃತ್ತಿ ಪಡೆಯುತ್ತಿದ್ದು, ತಮ್ಮ ಅರ್ಜಿ ಪರಿಗಣಿಸುವಂತೆ ಕೋರಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಮೂಲಗಳು ಹೇಳಿವೆ.

1990ನೇ ಐಪಿಎಸ್ ಬ್ಯಾಚ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್, ರಾಜ್ಯದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 
ಬೆಂಗಳೂರು ಪೊಲೀಸ್ ಕಮೀಷನರ್ ಆಗಿ ಕೆಲಸ ಮಾಡಿದ್ದರು. 

ಸ್ವಯಂ ನಿವೃತ್ತಿ ಸಿಗುತ್ತಿದ್ದಂತೆ ಭಾಸ್ಕರ್ ರಾವ್ ರಾಜಕೀಯ ಪ್ರವೇಶಿಸುವ ಸಾಧ್ಯತೆಯಿದೆ. ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಮಾತುಗಳು ಕೇಳಿಬರುತ್ತಿವೆ. ಭಾಸ್ಕರ್ ರಾವ್ ಅವರಿಗೆ ಕಾಂಗ್ರೆಸ್ ಅಥವಾ ಎಎಪಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.