ರೈತರ ಸೇವಾ ಸಹಕಾರ ಸಂಘದಲ್ಲಿ ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನ
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಗಳೂರು: ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಯ ಹೆಸರು: ಕಿರಿಯ ಸಹಾಯಕ
ಒಟ್ಟು ಹುದ್ದೆಗಳ ಸಂಖ್ಯೆ: 8
ವೇತನ: 21400 ರೂ. ರಿಂದ 42,000 ರೂ. ಜತೆಗೆ ಇತರೆ ಭತ್ಯೆಗಳು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01-10-2021 ರ ಸಂಜೆ 5 ಗಂಟೆವರೆಗೆ
ಕರ್ತವ್ಯ ಸ್ಥಳ: ಬೆಂಗಳೂರು ನಗರ
ಮೀಸಲಾತಿ
ಸಾಮಾನ್ಯ ವರ್ಗ - 4, ಸಾಮಾನ್ಯ ವರ್ಗ ಮಹಿಳಾ ಮೀಸಲು- 2, ಪರಿಶಿಷ್ಟ ಪಂಗಡ - 1, ಪ್ರವರ್ಗ 2 (ಎ) - 1 ಸೇರಿ ಒಟ್ಟು ಹುದ್ದೆಗಳು 8.
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ
ಕನಿಷ್ಠ 18 ವರ್ಷ ದಿಂದ ಗರಿಷ್ಠ ವಯೋಮಿತಿ 35 ವರ್ಷ
ಹಿಂದುಳಿದ ವರ್ಗದ ಪ್ರವರ್ಗಕ್ಕೆ - 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಗರಿಷ್ಠ 40 ವರ್ಷ.
ಅರ್ಜಿ ಸಲ್ಲಿಸುವ ವಿಧಾನ ಹೇಗೆ?
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆಯಬಹುದು. ರೂ.1000 ಕ್ಕೆ ಡಿಡಿಯನ್ನು 'ಸಿರೈ.ಸೇ.ಸ.ಸಂಘ ನಿಯಮಿತ, ಅತ್ತಿಬೆಲೆ, ಇವರ ಹೆಸರಿನಲ್ಲಿ ನೀಡಿ ಅರ್ಜಿಯನ್ನು ಪಡೆಯಬೇಕು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ವಿಳಾಸ - ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತ, ಅತ್ತಿಬೆಲೆ - 562107ಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


