ಬೆಳಗಾವಿ: ಸರ್ಕಾರಿ ಕಾರಿನಲ್ಲಿ ಶಾಸಕರ ಪುತ್ರನ ಖಾಸಗಿ ದರ್ಬಾರ್; ವಿಡಿಯೋ ವೈರಲ್
ಬೆಳಗಾವಿ ಜಿಲ್ಲೆಯ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಂದ ಸರ್ಕಾರಿ ವಾಹನ ದುರ್ಬಳಕೆಯಾಗುತ್ತಿದ್ದು, ಪುತ್ರ ಅರುಣ್ ಶಾಸಕರಿಗೆ ನೀಡಿದ ಸರ್ಕಾರಿ ಕಾರಿನಲ್ಲಿ ಓಡಾಡುತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

ಅಥಣಿ: ಬೆಳಗಾವಿ ಜಿಲ್ಲೆಯ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಂದ ಸರ್ಕಾರಿ ವಾಹನ ದುರ್ಬಳಕೆಯಾಗುತ್ತಿದ್ದು, ಪುತ್ರ ಅರುಣ್ ಶಾಸಕರಿಗೆ ನೀಡಿದ ಸರ್ಕಾರಿ ಕಾರಿನಲ್ಲಿ ಓಡಾಡುತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸರ್ಕಾರದಿಂದ ನೀಡಿದ ಕಾರನ್ನು ಶಾಸಕರ ಪುತ್ರ ದುರುಪಯೋಗ ಪಡಿಸಿಕೊಳ್ಳುತ್ತಿದ್ದು ತಮ್ಮ ಖಾಸಗಿ ಕಾರ್ಯಗಳಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಆದಿ ಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಹಿನ್ನೆಲೆ ಸರ್ಕಾರದಿಂದ ಕಾರು ಮಂಜೂರಾಗಿದೆ. ಆದರೆ ಜನರ ತೆರಿಗೆ ಹಣದಲ್ಲಿ ಸರ್ಕಾರದಿಂದ ಭರಿಸುವ ಡಿಸೇಲ್ ಹಾಕಿಕೊಂಡು ಕ್ಷೇತ್ರದಲ್ಲಿ ಅವರ ಪುತ್ರ ಓಡಾಡುತ್ತಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಶಾಸಕರ ಹಿರಿಯ ಪುತ್ರ ಅರುಣ್ ಐಹೊಳೆ ಸರ್ಕಾರಿ ಕಾರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರದಲ್ಲಿರುವ ನಿಗಮದ ಅಧ್ಯಕ್ಷರು ಮಾತ್ರ ಸರ್ಕಾರದ ಕಾರು ಬಳಕೆ ಮಾಡಬೇಕು ಎಂಬ ನಿಯಮವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


