ರಾಜ್ಯ

ಕಲ್ಯಾಣ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪ ಮತ್ತೊಬ್ಬ ಉಕ್ಕಿನ ಮನುಷ್ಯ: ಬಸವರಾಜ ಬೊಮ್ಮಾಯಿ

ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಿ.ಎಸ್‌. ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪ ಮತ್ತೊಬ್ಬ ಉಕ್ಕಿನ ಮನುಷ್ಯ: ಬಸವರಾಜ ಬೊಮ್ಮಾಯಿ
ಪಟೇಲ್ ವಿಗ್ರಹಕ್ಕೆ ಸಿಎಂ ಮಾಲಾರ್ಪಣೆ
Published On :

ಕಲಬುರ್ಗಿ: ಹೈದರಾಬಾದ್‌ ಕರ್ನಾಟಕದ ವಿಮೋಚನೆಗೆ ಕಾರಣರಾದ ಸರ್ದಾರ್‌ ವಲ್ಲಭಭಾಯಿ ಪಟೇಲರು ಪ್ರಥಮ ಉಕ್ಕಿನ ಮನುಷ್ಯರಾದರೆ, ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಿ.ಎಸ್‌. ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ. 

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಹಲವಾರು ಕಾರ್ಯಕ್ರಮಗಳಿಗೂ ಅವರು ರೂವಾರಿಗಳಾಗಿದ್ದಾರೆ. ಅವರ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ ಎಂದರು.

ಜನರ ಜೀವನ ಮಟ್ಟ ಸುಧಾರಿಸುವ ಮೂಲಕ ಕಲ್ಯಾಣ ಕರ್ನಾಟಕ ಹೆಸರಿಗೆ ಸಾರ್ಥಕತೆ ತುಂಬುವ ಛಲದಿಂದ ನಾನು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ನಮ್ಮ ಈ ಸಂಕಲ್ಪಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದರು. ಸರ್ದಾರ್‌ ವಲ್ಲಭಭಾಯಿ ಪಟೇಲರು ಭಾರತವನ್ನು ರಿಪಬ್ಲಿಕ್‌ ದೇಶವನ್ನಾಗಿ  ಮಾಡಿದ ಪ್ರಥಮ ನಾಯಕರು. ಅವರು ನಮಗೆಲ್ಲ ಆದರ್ಶರು. ಅವರು ತೋರಿಸಿರುವ ತತ್ವ– ಆದರ್ಶಗಳ ಅಡಿಯಲ್ಲಿ ಸ್ವತಂತ್ರ ಭಾರತವನ್ನು ನಾವು ಮುನ್ನಡೆ ಮಾಡುತ್ತಿದ್ದೇವೆ’ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.