ರಾಜ್ಯ

ರಾಜ್ಯದಲ್ಲಿ ಇನ್ನೂ ಎರಡು, ಮೂರು ದಿನ ಮಳೆ ಕಾಟ, ಎಚ್ಚರ

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.

ರಾಜ್ಯದಲ್ಲಿ ಇನ್ನೂ ಎರಡು, ಮೂರು ದಿನ ಮಳೆ ಕಾಟ, ಎಚ್ಚರ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.

ಕಳೆದ 15 ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಗುರುವಾರ ಮಳೆಯ ಆರ್ಭಟ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ.

ಇಲಾಖೆ ವರದಿಯ ಪ್ರಕಾರ ಇದೇ 18 ರಿಂದ 21ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದ್ದು, ಶನಿವಾರ ಹಾಗೂ ಭಾನುವಾರ ವರುಣನ ಅಬ್ಬರ ಹೆಚ್ಚಾಗಲಿದೆ ಎಂದೂ ವರದಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.