ಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಾರವಾರ: ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳದಲ್ಲಿ ದೊರೆತ ದಾಖಲೆಯ ಪ್ರಕಾರ ಮೃತರನ್ನು ಬೆಂಗಳೂರಿನ ಜೆ.ಪಿ. ನಗರದ ನಿವಾಸಿಗಳಾದ ಆದಿತ್ಯ ಬಿ.ಎಸ್. (25) ಹಾಗೂ ಲಕ್ಷ್ಮೀ (48) ಎಂದು ಗುರ್ತಿಸಲಾಗಿದೆ.
ಇವರು ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿರಬಹುದು ಎಂದು ಅಂದಾಜಿಸಲಾಗಿದ್ದು, ಹುಯಿಲುಮಡಿಗೆ ಹೋಗಿ 2-3 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯ ಕುರಿತಂತೆ ಮಾಹಿತಿ ಪಡೆದ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಘಟನೆ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದರು. ಮೃತದೇಹಗಳ ಜೊತೆಗೆ ಚಾಲನಾ ಪರವಾನಗಿ ಹಾಗೂ ಆಧಾರ್ ಕಾರ್ಡ್ ಗಳಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


