ಬೆಂಗಳೂರಿನ ಪ್ರಮುಖ ಕಟ್ಟಡಗಳ ಫೋಟೋ ಕ್ಲಿಕ್ಕಿಸುತ್ತಿದ್ದವ ಸಿಸಿಬಿ ಬಲೆಗೆ
ನಗರದ ಪ್ರಮುಖ ಸ್ಥಳ, ಕಟ್ಟಡ, ರಕ್ಷಣಾ ಸಂಸ್ಥೆಯ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಗರದ ಪ್ರಮುಖ ಸ್ಥಳ, ಕಟ್ಟಡ, ರಕ್ಷಣಾ ಸಂಸ್ಥೆಯ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ತಾನು ತೆಗೆದ ಫೋಟೋಗಳನ್ನು ವಿದೇಶಿ ಏಜೆನ್ಸಿಗಳಿಗೆ ಕಳುಹಿಸುತ್ತಿದ್ದ ಎಂಬ ಮಿಲಿಟರಿ ಇಂಟೆಲಿಜೆನ್ಸ್ ನೀಡಿದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದೇಶದ ಬಹುತೇಕ ಏಜೆನ್ಸಿಗಳಿಗೆ ಭಯೋತ್ಪಾದಕರ ಸಂಪರ್ಕವಿರುವುದರಿಂದ ನಗರದ ಪ್ರಮುಖ ಡಿಫೆನ್ಸ್ ಸೇರಿ ಹಲವು ಮಾಹಿತಿ ಸೋರಿಕೆಯಾದರೆ ಅಪಾಯ ವಿರುತ್ತದೆ. ಹೀಗಾಗಿ ಬಂಧಿತ ಯಾವ ಏಜೆನ್ಸಿಗಳಿಗೆ ಮಾಹಿತಿ ರವಾನಿಸುತ್ತಿದ್ದ ಎಂಬುದರ ಕುರಿತು ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸದ್ಯ ಆರೋಪಿಯ ವಿರುದ್ಧ ಅಫೀಷಿಯಲ್ ಸೀಕ್ರೆಟ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


