ಪ್ರಕೃತಿ, ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸಬೇಕು: ಬೆಂಗಳೂರು ವಿವಿ ಕುಲಪತಿ ಪ್ರೊ. ವೇಣುಗೋಪಾಲ್
ಪ್ರಕೃತಿ ಮತ್ತು ಅಭಿವೃದ್ಧಿ ನಡುವೆ ಸಮತೋಲನ ಸಾಧಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಕೆ.ಆರ್. ವೇಣುಗೋಪಾಲ್ ಪ್ರತಿಪಾದಿಸಿದ್ದಾರೆ.

ಬೆಂಗಳೂರು: ಪ್ರಕೃತಿ ಮತ್ತು ಅಭಿವೃದ್ಧಿ ನಡುವೆ ಸಮತೋಲನ ಸಾಧಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಕೆ.ಆರ್. ವೇಣುಗೋಪಾಲ್ ಪ್ರತಿಪಾದಿಸಿದ್ದಾರೆ.
75ನೇ ಸ್ವಾತಂತ್ರೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪರಿಸರ ವಿಜ್ಞಾನ ಇಲಾಖೆಯಿಂದ ಆಯೋಜಿಸಲಾಗಿದ್ದ ಓಜೋನ್ ರಕ್ಷಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಹ್ಮಾಂಡ ವೈವಿಧ್ಯಮಯ ಜೀವನದ ಅಸ್ತಿತ್ವಕ್ಕಾಗಿ ಇರುವ ಪರಿಸರದ ಉತ್ತಮ ಸಂಯೋಜನೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಿಎಂಆರ್ ವಿಶ್ವವಿದ್ಯಾಲಯದ ಕಾನೂನು ಅಧ್ಯಯನ ಶಾಲೆಯ ಡೀನ್ ಮತ್ತು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ ಟಿ ಆರ್ ಸುಬ್ರಹ್ಮಣ್ಯ ಅವರು ವಿಶೇಷ ಉಪನ್ಯಾಸ ನೀಡಿದರು. ಅಲ್ಲದೇ, ಪರಿಸರಕ್ಕೆ ಸಂಬಂಧಿಸಿದ ವಿವಿಧ ನ್ಯಾಯಾಲಯ ತೀರ್ಪುಗಳು ಮತ್ತು ಒಪ್ಪಂದಗಳ ತತ್ವಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ವಿವಿಧ ಅತಿಥಿಗಳಿಂದ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ವಿಭಾಗದ ಅಧ್ಯಕ್ಷ ಡಾ ಬಿ ಸಿ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಇತರ ವಿಭಾಗಗಳ ಪ್ರಾಧ್ಯಾಪಕರು, ಅತಿಥಿ ಅಧ್ಯಾಪಕರು, ಸಂಶೋಧನಾ ವಿದ್ವಾಂಸರು ಮತ್ತು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


