ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ದಾವಣಗೆರೆ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ ಮತ್ತು ಆರು ವರ್ಷದ ಮಗು ಧ್ರುವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದು, ಅವರ ಅಕ್ರಂದನ ಮುಗಿಲು ಮುಟ್ಟಿದೆ.
ಮಗು ಮತ್ತು ತನ್ನ ಪತ್ನಿಗೆ ವಿಷ ಕುಡಿಸಿ ಬಳಿಕ ಕೃಷ್ಣಾ ನಾಯ್ಕ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಎಂಆರ್ ಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೃಷ್ಣಾ ನಾಯ್ಕ್ ಅವರು ಲಾರಿ ಚಾಲಕರಾಗಿದ್ದರು. ಪತ್ನಿ ಸುಮಾ ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಆಸ್ಪತ್ರೆಗೆ ಅಲೆದಾಡುತ್ತಿದ್ದರು. ಅಲ್ಲದೇ, ಖರ್ಚು ವೆಚ್ಚವು ಹೆಚ್ಚಾಗಿತ್ತು. ಹೀಗಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


