ರಾಜ್ಯ

ಬೆಂಗಳೂರು: ವಿವಿಧೆಡೆ ಸಿಸಿಬಿ ದಾಳಿ, 25 ಲಕ್ಷ ರೂ. ವಶ

ನಗರದ ಹಲವು ಅಕ್ರಮ ಚಟುವಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.

ಬೆಂಗಳೂರು: ವಿವಿಧೆಡೆ ಸಿಸಿಬಿ ದಾಳಿ, 25 ಲಕ್ಷ ರೂ. ವಶ
ಸಿಸಿಬಿ ಪೊಲೀಸರು
Published On :

ಬೆಂಗಳೂರು: ನಗರದ ಹಲವು ಅಕ್ರಮ ಚಟುವಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.

ಜೂಜು ಹಾಗೂ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 25 ಲಕ್ಷ ರೂ ಜಪ್ತಿ ಮಾಡಿಕೊಂಡಿದ್ದಾರೆ.

ನಗರದ ಒಟ್ಟು ಐದು ಕಡೆ ದಾಳಿ ನಡೆಸಲಾಗಿದೆ. ಎಚ್‌ಎಎಲ್, ಕಾಮಾಕ್ಷಿಪಾಳ್ಯ, ಸಂಪೆಗೆಹಳ್ಳಿ, ವಿಜಯನಗರ, ಚಿಕ್ಕಜಾಲದಲ್ಲಿರುವ ಜೂಜು ಮತ್ತು ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಐದು ಕಡೆ ದಾಳಿ ವೇಳೆ 25 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.