ರಾಜ್ಯ

ಬೆಂಗಳೂರು ವಕೀಲರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಮಂಜುನಾಥ್‌ ನೇಮಕ

ಬೆಂಗಳೂರು ವಕೀಲರ ಸಂಘದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರವಧಿ ಪೂರ್ಣಗೊಂಡಿದ್ದರೂ ಅದಕ್ಕೆ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಸಂಘದ ಕಾರ್ಯ ಚಟುವಟಿಕೆ ನಿರ್ವಹಿಸಲು ನಗರ ಜಿಲ್ಲಾಧಿಕಾರಿ ಮಂಜುನಾಥ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ವಕೀಲರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಮಂಜುನಾಥ್‌ ನೇಮಕ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರವಧಿ ಪೂರ್ಣಗೊಂಡಿದ್ದರೂ ಅದಕ್ಕೆ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಸಂಘದ ಕಾರ್ಯ ಚಟುವಟಿಕೆ ನಿರ್ವಹಿಸಲು ನಗರ ಜಿಲ್ಲಾಧಿಕಾರಿ ಮಂಜುನಾಥ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ವಕೀಲ ಎ ಪಿ ರಂಗನಾಥ್ ಅಧ್ಯಕ್ಷತೆಯ ಕಾರ್ಯಕಾರಿ ಸಮಿತಿಯ ಅವಧಿ 2021ರ ಜನವರಿ 23ಕ್ಕೆ ಪೂರ್ಣಗೊಂಡಿತ್ತು. ಅವಧಿ ಪೂರ್ಣಗೊಂಡ ನಂತರವೂ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ವಕೀಲರ ಸಂಘದಲ್ಲಿ 20 ಸಾವಿರಕ್ಕೂ ಅಧಿಕ ನೋಂದಾಯಿತ ವಕೀಲರಿದ್ದಾರೆ. ಅದರ ಕಾರ್ಯಕಾರಿ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಖಜಾಂಚಿ ಸೇರಿ 29 ಸದಸ್ಯರನ್ನು ಒಳಗೊಂಡಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.