ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಪ್ರಸ್ತುತ ಹಿಮಾಚಲ ಪ್ರದೇಶ ನ್ಯಾಯಮೂರ್ತಿಯಾಗಿದರುವ ಕರ್ನಾಟಕದ ಆರ್.ವಿ. ಮಳಿಮಠ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಕಟ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ ಎಸ್ ಓಕಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡಿದ ಬಳಿಕ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ರಾಜ್ಯ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತೆಲಂಗಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಶಿಫಾರಸು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


