ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರದ ಆದೇಶ: ಶ್ರೀರಾಮುಲು
ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ.

ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ.
ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಸಾರಿಗೆ ಯೂನಿಯನ್ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿ ತೊಂದರೆಯಾಗಬಾರದೆಂದು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ 4,200 ಸಾರಿಗೆ ನೌಕರರನ್ನು ಪುನರ್ ನೇಮಕ ಬಗ್ಗೆ ಒತ್ತಡ ಇತ್ತು. ಈ ಬಗ್ಗೆ ಮೊದಲು ಆದ್ಯತೆ ಕೊಟ್ಟು ಮರು ನೇಮಕ ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ಏಪ್ರಿಲ್ನಲ್ಲಿ ಮುಷ್ಕರ ನಡೆಸಿದ್ದರು. ಮುಷ್ಕರದಲ್ಲಿ ಭಾಗಿಯಾಗಿದ್ದ 4,200 ಸಾರಿಗೆ ನೌಕರರನ್ನು ವಜಾಗೊಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


