ರಾಜ್ಯ

ಬೆಂಗಳೂರು: ಕ್ಯಾಬ್ ಚಾಲಕನ ವಿರುದ್ಧ ಅತ್ಯಾಚಾರ ಆರೋಪ

ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು: ಕ್ಯಾಬ್ ಚಾಲಕನ ವಿರುದ್ಧ ಅತ್ಯಾಚಾರ ಆರೋಪ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.

ನಿನ್ನೆ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗಲು ಯುವತಿ ನಗರದ ಹೆಚ್​ಎಸ್​​ಆರ್ ಲೇಔಟ್​ನಿಂದ ಮುರುಗೇಶಪಾಳ್ಯಕ್ಕೆ ತೆರಳಲು ಕ್ಯಾಬ್ ಬುಕ್‌ ಮಾಡಿದ್ದರು. ಹೀಗಾಗಿ ಹೆಚ್​ಎಸ್​​ಆರ್ ಲೇಔಟ್​ಗೆ ಬಂದು ಯುವತಿ ಕರೆದೊಯ್ದ ಚಾಲಕ, ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಜೀವನ್ ಭೀಮಾನಗರ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.