ಐವರಿಕೋಸ್ಟ್ ಪ್ರಜೆ ಬಂಧನ: 2.5 ಕೋಟಿ ರೂ. ಮೌಲ್ಯದ ಗಾಂಜಾ ವಶ, ಪೊಲೀಸ್ ತಂಡಕ್ಕೆ 60 ಸಾವಿರ ರೂ. ನಗದು ಬಹುಮಾನ ಘೋಷಣೆ
ಶಾಂಪೇನ್ ಬಾಟಲ್ಗಳಲ್ಲಿ ಎಂಡಿಎಂ ಕಿಸ್ಟಲ್ ಪೌಡರ್ ತುಂಬಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರಿಕೋಸ್ಟ್ ದೇಶದ ಪ್ರಜೆಯನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಶಾಂಪೇನ್ ಬಾಟಲ್ಗಳಲ್ಲಿ ಎಂಡಿಎಂ ಕಿಸ್ಟಲ್ ಪೌಡರ್ ತುಂಬಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರಿಕೋಸ್ಟ್ ದೇಶದ ಪ್ರಜೆಯನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ.
28 ವರ್ಷದ ದೋಸ್ಸೋ ಖಲೀಫಾ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 2.5 ಕೋಟಿ ಮೌಲ್ಯದ 2.5 ಕೆ.ಜಿ. ಮೌಲ್ಯದ ಡ್ರಗ್ಸ್, ಒಂದು ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಖಲೀಫಾ ಕಳೆದ ಐದು ವರ್ಷಗಳ ಹಿಂದೆ ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದಿದ್ದನು. ಡ್ರಗ್ಸ್ ದಂಧೆಕೋರರ ಸಂಪರ್ಕ ಸಾಧಿಸಿ ನಿರಂತರವಾಗಿ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೊಪಿ ವಿರುದ್ದ 2018ರಲ್ಲಿ ಬಾಗಲೂರು ಹಾಗೂ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಟೆಕ್ಕಿಗಳು, ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎಂಎ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ಮುರುಗನ್ ಪ್ರತಿಕ್ರಿಯಿಸಿ, ಬಂಧಿತ ಆರೋಪಿ ನಗರದಲ್ಲಿ ನಡೆಯುವ ಹೈ-ಎಂಡ್ ಪಾರ್ಟಿಗಳ ಪ್ರಮುಖ ಡ್ರಗ್ಸ್ ಪೆಡ್ಲರ್ಗಳಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ. ಗೋವಾದ ಡ್ರಗ್ಸ್ ಪೆಡ್ಲರ್ ರೊಂದಿಗೆ ಸಂಪರ್ಕ ಸಾಧಿಸಿ ಅಲ್ಲಿ ಶಾಂಪೇನ್ ಬಾಟಲ್ಗಳಲ್ಲಿ ಎಂಎಡಿಎಂ ಕ್ರಿಸ್ಟಲ್ ಪೌಡರ್ ತುಂಬಿ ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದ. ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಗೆ ನಿರಂತರವಾಗಿ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಎಂದು ಮಾಹಿತಿ ನೀಡಿದರು. ಸದ್ಯ ಆರೋಪಿಯ ಸಂಪರ್ಕದಲ್ಲಿವರ ಶೋಧ ಕಾರ್ಯ ಮುಂದುವರೆದಿದೆ ಎಂದರು.
60 ಸಾವಿರ ನಗದು ಬಹುಮಾನ ಘೋಷಣೆ
ಇದೇ ವೇಳೆ ಗಾಂಜಾ ಹಗರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸರ ತಂಡಕ್ಕೆ ನಗರ ಪೊಲೀಸ್ ಆಯುಕ್ತ ನಗದು ಬಹುಮಾನ ಘೋಷಣೆ ಮಾಡಿದ್ದಾರೆ. ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸ್ ತಂಡಕ್ಕೆ 60 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


